Homeರಾಜ್ಯರೌಡಿಶೀಟರ್‌ನನ್ನ ಅಟ್ಟಾಡಿಸಿ ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು

ರೌಡಿಶೀಟರ್‌ನನ್ನ ಅಟ್ಟಾಡಿಸಿ ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು

Rowdy sheeter beaten to death by miscreants

ಬೆಂಗಳೂರು,ಜೂ.7- ರೌಡಿಶೀಟರ್‌ ಒಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ರಾತ್ರಿ ಸೂಲಿಬೆಲೆ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದ ಜನತಾ ಕಾಲೋನಿಯ ನಿವಾಸಿ, ರೌಡಿಶೀಟರ್‌ ಖಲೀಂ ಉಲ್ಲಾ ಖಾನ್‌(36) ಭೀಕರವಾಗಿ ಕೊಲೆಯಾಗಿರುವ ರೌಡಿ. ಹಣ್ಣಿನ ವ್ಯಾಪಾರ ಮುಗಿಸಿಕೊಂಡು ರಾತ್ರಿ 11.30ರ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ರೌಡಿ ಖಲೀಂ ಉಲ್ಲಾ ಖಾನ್‌ ಮನೆಗೆ ಹೋಗುತ್ತಿದ್ದನು.

ಆತನ ಮನೆಯ ಸಮೀಪವೇ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು ಬೈಕ್‌ನಲ್ಲಿ ಬರುತ್ತಿದ್ದಂತೆ ಅಡ್ಡಗಟ್ಟಿ ಮಾರಕಾಸಗಳಿಂದ ದಾಳಿ ಮಾಡಿದ್ದಾರೆೆ. ಆಗ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾಗ ಅಟ್ಟಾಡಿಸಿಕೊಂಡು ಹೋಗಿ 20ಕ್ಕೂ ಹೆಚ್ಚು ಕಡೆ ಮಾರಕಾಸಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದ ಸೂಲಿಬೆಲೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಸೂಲಿಬೆಲೆಯಲ್ಲಿ ಬಿಗಿಯಾದ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ.

RELATED ARTICLES
spot_img

Latest News