ಮುಂಬೈ,ಅ.3- ಮಹಾರಾಷ್ಟ್ರದ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಹಾಗೂ ಸಿಬ್ಬಂದಿ ಕೊರತೆಯಿಂದ ಮೃತಪಟ್ಟ ನವಜಾತ ಶಿಶುಗಳ ಸಂಖ್ಯೆ 31 ಕ್ಕೇರಿದೆ. ನಿನ್ನೆ ಒಂದೇ ದಿನ 12 ನವಜಾತ ಶಿಶುಗಳು ಸೇರಿದಂತೆ 24 ಮಂದಿ ಸಾವನ್ನಪ್ಪಿದ್ದರು. ಇದೀಗ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಇದು ಇನ್ನಷ್ಟು ಹೆಚ್ಚಾಗಬಹುದು ಎಂದು ತಿಳಿದುಬಂದಿದೆ.
ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಮುಂದುವರೆಯುತ್ತಲೇ ಇದೆ. ಕಳೆದ ರಾತ್ರಿಯಿಂದ ಈವರೆಗೂ 4 ನವಜಾತ ಶಿಶು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ದುರದೃಷ್ಟವೆಂದರೆ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೂ ಇಲ್ಲ, ಸಿಬ್ಬಂದಿಗಳೂ ಇಲ್ಲ, ರೋಗಿಗಳನ್ನು ನೋಡಿಕೊಳ್ಳುವವರಂತೂ ಮೊದಲೇ ಇಲ್ಲ. ಇದಕ್ಕೆ ಸರ್ಕಾರ ನೇರ ಹೊಣೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌವ್ಹಾಣ್ ಹೇಳಿದ್ದಾರೆ.
ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅಶೋಕ್ ಚೌವ್ಹಾಣ್, ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಸ್ಥಿತಿ ನರಕಸದೃಶವಾಗಿದೆ. ಕಡೆ ಪಕ್ಷ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಘಟನೆಯ ಬಗ್ಗೆ ಮಾಹಿತಿಯನ್ನೂ ಪಡೆದುಕೊಂಡಿಲ್ಲ.ಆಸ್ಪತ್ರೆಯ ಡೀನ್ ಡಾ.ವಾಕೋಡೆ ಅವರು ರೋಗಿಗಳನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇರುವ ಸಿಬ್ಬಂದಿಗಳು ಹಾಗೂ ರೋಗಿಗಳ ಸಂಖ್ಯೆಗೆ ಸಾಕಷ್ಟು ವ್ಯತ್ಯಾಸವಿದೆ. ಸರ್ಕಾರ ಕೂಡಲೇ ಈ ಬಗ್ಗೆ ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.
ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ
ನಾವು ಘಟನೆ ಕುರಿತಂತೆ ಮೂವರ ನೇತೃತ್ವದಲ್ಲಿ ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಲಿದ್ದೇವೆ. ಇದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿಗಳು ತಾಕೀತು ಮಾಡಿದ್ದಾರೆ.
ಘಟನೆ ಕುರಿತಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಸಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡಲೇ ಸಂಪೂರ್ಣವಾದ ಮಾಹಿತಿಯನ್ನು ನೀಡಬೇಕು. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳು ಮತ್ತು ನವಜಾತ ಶಿಶುಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು ನೀಡಬೇಕು. ಉದಾಸೀನತೆ ತೋರಿದರೆ ಅಂತವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.
ಇನ್ನು ಘಟನೆಯ ಬಗ್ಗೆ ಎನ್‍ಸಿಟಿ ಮುಖ್ಯಸ್ಥ ಶರದ್‍ಪವಾರ್ ಅವರು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕದನದಲ್ಲಿ ಅಮಾಯಕರನ್ನು ಬಲಿ ಕೊಡಬೇಡಿ. ಮೊದಲು ರೋಗಿಗಳು ಮತ್ತು ನವಜಾತ ಶಿಶುಗಳನ್ನು ಉಳಿಸಲು ಮುಂದಾಗಿ ಎಂದು ಹೇಳಿದ್ದಾರೆ.