Homeರಾಜ್ಯರಾಜ್ಯಸಭೆ, ವಿಧಾನಪರಿಷತ್‌ ಚುನಾವಣೆಗೆ ಅಭ್ಯರ್ಥಿಗಳ ಉಮೇದುವಾರಿಕೆ ಸಲ್ಲಿಕೆ

ರಾಜ್ಯಸಭೆ, ವಿಧಾನಪರಿಷತ್‌ ಚುನಾವಣೆಗೆ ಅಭ್ಯರ್ಥಿಗಳ ಉಮೇದುವಾರಿಕೆ ಸಲ್ಲಿಕೆ

Candidates file nominations for Rajya Sabha, Upper House

ಬೆಂಗಳೂರು,ಜೂ.8- ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭೆ ಹಾಗೂ ವಿಧಾನಪರಿಷತ್‌ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್‌‍ ಹಾಗೂ ಜೆಡಿಎಸ್‌‍ನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ರಾಜ್ಯಸಭೆಗೆ ್ರೆ.ಎಂ.ನಾಗರಾಜ್‌ ವಿಧಾನಪರಿಷತ್‌ಗೆ ಲಿಂಗರಾಜ್‌ ಪಾಟೀಲ್‌ ಮತ್ತು ರಘು ಕೌಟಿಲ್ಯ ಅವರು ನಾಮಪತ್ರ ಸಲ್ಲಿಸಿದರು.

ಅದೇ ರೀತಿ ಕಾಂಗ್ರೆಸ್‌‍ನ 5ನೇ ಅಭ್ಯರ್ಥಿಯಾಗಿ ವಿನಯ್‌ ಕಾರ್ತಿಕ್‌ ಮತ್ತು ಕೊನೆ ಕ್ಷಣದಲ್ಲಿ ಅಚ್ಚರಿ ಎಂಬಂತೆ ಜೆಡಿಎಸ್‌‍ನಿಂದ ಗೋವಿಂದರಾಜ್‌ ಉಮೇದುವಾರಿಕೆ ಮಾಡುವುದರೊಂದಿಗೆ ಚುನಾವಣಾ ಕಣ ರಂಗೇರಿದೆ. ಎಲ್ಲಾ ಅಭ್ಯರ್ಥಿಗಳು ಚುನಾವಣಾ ಅ ಕಾರಿಯೂ ಆಗಿರುವ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪಘಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಜಗದೀಶ್‌ ಶೆಟ್ಟರ್‌, ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್‌ ಸಿರೋಯ, ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರು, ಮಾಜಿ ಶಾಸಕರು ಸೇರಿದಂತೆ ಮತ್ತಿತರ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಕಾಂಗ್ರೆಸ್‌‍ 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಿನಯ್‌ ಕಾರ್ತಿಕ್‌ ನಾಮಪತ್ರ ಸಲ್ಲಿಸುವ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌, ಸಚಿವರು, ಶಾಸಕರು, ಪಕ್ಷದ ಮುಖಂಡರು ಹಾಜರಿದ್ದರು.

ಜೆಡಿಎಸ್‌‍ನ ಗೋವಿಂದರಾಜ್‌ ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಶಾಸಕರು, ವಿಧಾನಪರಿಷತ್‌ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು. ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಗುರುವಾರ ಕೊನೆಯ ದಿನವಾಗಿದೆ. ಅಗತ್ಯವಿದ್ದರೆ ಜೂ.18ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆದು ಅಂದೇ ಲಿತಾಂಶ ಪ್ರಕಟಗೊಳ್ಳಲಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ನ ಎಂ.ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್‌ ಅಲಿಖಾನ್‌, ಪವನ್‌ ಖೇರಾ ಮತ್ತು ಬಿಜೆಪಿಯ ಪ್ರೊ.ಎನ್‌.ನಾಗರಾಜ್‌ ಬಹುತೇಕ ಅವಿರೋಧವಾಗಿ ಆಯ್ಕೆಯಾಗುವ ಸಂಭವ ಹೆಚ್ಚಾಗಿದೆ. ವಿಧಾನಪರಿಷತ್‌ಗೆ ಕಾಂಗ್ರೆಸ್‌‍ನ 5ನೇ ಅಭ್ಯರ್ಥಿ ಕಣಕ್ಕಿಳಿದಿರುವುದು ಮತ್ತು ಜೆಡಿಎಸ್‌‍ ಕೂಡ ತನ್ನ ಅಭ್ಯರ್ಥಿಯ ಉಮೇದುವಾರಿಕೆ ಮಾಡಿರುವುದರಿಂದ ಚುನಾವಣೆ ನಡೆಯುವುದು ಅನಿವಾರ್ಯವಾಗಿದೆ.

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಲು ಓರ್ವ ಅಭ್ಯರ್ಥಿ 28 ಮತಗಳನ್ನು ಪಡೆಯಬೇಕು. ಕಾಂಗ್ರೆಸ್‌‍ 4, ಬಿಜೆಪಿಯಿಂದ ಇಬ್ಬರು ಅಭ್ಯರ್ಥಿಗಳು ನಿರಾಯಾಸವಾಗಿ ಗೆಲ್ಲಲಿದ್ದಾರೆ. ಕಾಂಗ್ರೆಸ್‌‍ನ 5ನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಹಾಗೂ ಬಿಜೆಪಿ- ಜೆಡಿಎಸ್‌‍ ಮೈತ್ರಿಕೂಟದ ಅಭ್ಯರ್ಥಿ ಗೋವಿಂದರಾಜ್‌ ನಡುವೆ ಪೈಪೋಟಿ ಏರ್ಪಡಲಿದೆ.

ವಿಧಾನಪರಿಷತ್‌ ಸದಸ್ಯರಾದ ಗೋವಿಂದರಾಜ್‌, ನಸೀಬ್‌ ಅಹಮದ್‌, ತಿಪ್ಪಣ್ಣಪ್ಪ ಕನಕನೂರು, ಬಿ.ಕೆ.ಹರಿಪ್ರಸಾದ್‌, ಎಂಟಿಬಿ ನಾಗರಾಜ್‌, ಪ್ರತಾಪ ಸಿಂಹ ನಾಯಕ್‌ ಮತ್ತು ಸುನೀಲ್‌ ವಲ್ಯಾಪುರೆ ಅವರ ಅ ಕಾರ ಅವ ಈ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿದೆ. ತೆರವಾಗಲಿರುವ ಈ ಸ್ಥಾನಕ್ಕೆ ಚುನಾವಣೆ ಎದುರಾಗಿದೆ.

RELATED ARTICLES

Latest News