ಬೆಂಗಳೂರು,ಜೂ.8- ಬ್ಯಾಂಕಾಕ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟೀಯ ವಿಮಾನ ನಿಲ್ದಾಣದಕ್ಕೆ ಆಗಮಿಸಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಿರುವ ಕಸ್ಟಮ್ಸೌ ಅಧಿಕಾರಿಗಳು ಅವರುಗಳಿಂದ ಒಟ್ಟು 5.90 ಕೋಟಿ ಮೌಲ್ಯದ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಕಸ್ಟಮ್ಸೌ ಅಧಿಕಾರಿಗಳು ಅನುಮಾನದ ಮೇಲೆ ಇಬ್ಬರು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದ ವೇಳೆ ಮಾದಕ ವಸ್ತು ಪತ್ತೆಯಾಗಿದೆ.
ಸಾಮಾಜಿಕ ಜಾಲತಾಣ ಎ್ಸ್ನಲ್ಲಿ ನೀಡಿದ ಮಾಹಿತಿಯ ಪ್ರಕಾರ, ಪ್ರಯಾಣಿಕನ ಚೆಕ್-ಇನ್ ಲಗೇಜ್ನಲ್ಲಿ ಅಡಗಿಸಿಟ್ಟಿದ್ದ 10.20 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ 3.57 ಕೋಟಿ ಎಂದು ತಿಳಿಸಲಾಗಿದೆ.
ಇದೇ ರೀತಿಯ ಮತ್ತೊಂದು ಪ್ರಕರಣದಲ್ಲಿ, ಜೂನ್ 4ರಂದು ಬ್ಯಾಂಕಾಕ್ನಿಂದ ಬಂದಿದ್ದ ಮತ್ತೊಬ್ಬ ಪ್ರಯಾಣಿಕನಿಂದ 6.66 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ನಡೆದ ತಪಾಸಣೆಯ ವೇಳೆ ಪ್ರಯಾಣಿಕನ ಲಗೇಜ್ನಲ್ಲಿ ಅಡಗಿಸಿಡಲಾಗಿದ್ದ 2.33 ಕೋಟಿ ಮೌಲ್ಯದ ಗಾಂಜಾ ಪತ್ತೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ಪ್ರಕರಣಗಳಲ್ಲಿ ಆರೋಪಿಗಳ ಗುರುತನ್ನು ಬಹಿರಂಗಪಡಿಸಲಾಗಿಲ್ಲ. ಬಂಧಿತ ಪ್ರಯಾಣಿಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾದಕ ವಸ್ತುಗಳ ಅಕ್ರಮ ಸಾಗಾಟ ತಡೆಗೆ ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸೌ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
