ಬೆಂಗಳೂರು,ಜ.19- ಮನೆಗಳ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಲ್ಸನ್‍ಗಾರ್ಡನ್ ಠಾಣೆ ಪೊಲೀಸರು ಬಂಧಿಸಿ ನಾಲ್ಕು ಲಕ್ಷ ರೂ. ಮೌಲ್ಯದ ಏಳು ದ್ವಿಚಕ್ರ ವಾಹನಗಳು ಹಾಗೂ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ.
ದ್ವಿಚಕ್ರ ವಾಹನಗಳ ಕಳ್ಳತನ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಮಾಹಿತಿಗಳನ್ನು ಕಲೆ ಹಾಕಿ ನಗರದ ನಿವಾಸಿಗಳಾದ ಪ್ರದೀಪ್ ಮತ್ತು ಹರ್ಷದ್ ಖಾನ್‍ನನ್ನು ಬಂಧಿಸಿ ವಿಲ್ಸನ್‍ಗಾರ್ಡನ್ ಠಾಣೆ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನ ಮತ್ತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಒಂದು ದ್ವಿಚಕ್ರ ವಾಹನ ಮತ್ತು ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದ ಒಂದು ದ್ವಿಚಕ್ರ ವಾಹನ ಹಾಗೂ ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕಳವಾಗಿದ್ದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಶೇಖರ್ ಹಾಗೂ ಹಲಸೂರು ಗೇಟ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಿವಾನಂದ ಛಲವಾದಿ ಅವರ ಮಾರ್ಗದರ್ಶನದಲ್ಲಿ ವಿಲ್ಸನ್‍ಗಾರ್ಡನ್ ಪೊಲೀಸ್ ಠಾಣೆ ಇನ್‍ಸ್ಪೆಕ್ಟರ್ ಫಾರೂಕ್ ಪಾಷ ಅವರ ನೇತೃತ್ವದ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡು ಇಬ್ಬರನ್ನು ಬಂಧಿಸಿ ದ್ವಿಚಕ್ರ ವಾಹನಗಳು ಹಾಗೂ ಕಾರನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ವ್ಹೀಲಿಂಗ್:ದ್ವಿಚಕ್ರ ವಾಹನ ವಶಕ್ಕೆ
ಬೆಂಗಳೂರು, ಜ.19- ಹಳೆ ವಿಮಾನ ನಿಲ್ದಾಣ ಮುಖ್ಯರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಸವಾರನ ವಿರುದ್ಧ ಜೆಬಿ ನಗರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ನಾಸಾ ಸಂಪರ್ಕಕ್ಕೆ ಸಿಕ್ಕ ಚಂದ್ರಯಾನ-3ರ ಪ್ರಗ್ಯಾನ್ ರೋವರ್
ನಿನ್ನೆ ಜೆಬಿ ನಗರ ಸಂಚಾರ ಠಾಣಾ ಪೊಲೀಸರು ವ್ಹೀಲಿಂಗ್ ಮಾಡುವವರನ್ನು ಪತ್ತೆಹಚ್ಚಲು ವಿಶೇಷ ಕಾರ್ಯಾಚರಣೆ ಕೈಗೊಂಡಾಗ ಹಳೆ ವಿಮಾನ ನಿಲ್ದಾಣ ಮುಖ್ಯರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ದ್ವಿಚಕ್ರ ವಾಹನನನ್ನು ಪತ್ತೆ ಮಾಡಿದ್ದಾರೆ.
ಸವಾರ ವಯಸ್ಕ ನಾಗಿದ್ದು, ಆತನ ವಿರುದ್ಧ ಎಫ್‍ಐಆರ್ ದಾಖಲಿಸಿ ಕೊಂಡು ದ್ವಿಚಕ್ರ ವಾಹನ ಜಪ್ತಿ ಮಾಡಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೂರ್ವ ವಿಭಾಗ (ಸಂಚಾರ) ಉಪಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.