Monday, November 25, 2024
Homeರಾಷ್ಟ್ರೀಯ | Nationalಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ

ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ

ಲಕ್ನೋ,ಜ.19- ಜನವರಿ 22 ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿರುವಾಗಲೇ ಭಯೋತ್ಪಾದಕ ನಿಗ್ರಹ ದಳ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಿದೆ. ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾ ನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಮಾತನಾಡಿ, ಅಯೋಧ್ಯೆ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಯ ಮೇರೆಗೆ ನಡೆಸುತ್ತಿರುವ ತಪಾಸಣೆ
ಅಭಿಯಾನದ ಭಾಗವಾಗಿ, ಅಯೋಧ್ಯೆ ಜಿಲ್ಲೇಯ ಯುಪಿ-ಎಟಿಎಸ್‍ನಿಂದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಅವರ ಸಂಪರ್ಕ ಬೆಳಕಿಗೆ ಬಂದಿಲ್ಲ ಎನ್ನಲಾಗಿದೆ.

ರಾಜ್ಯಕ್ಕೆ ಪ್ರಧಾನಿ ಆಗಮನದ ಬೆನ್ನಲ್ಲೇ ಪುಟಿದೆದ್ದ ರಾಜ್ಯ ಬಿಜೆಪಿ

ಶ್ರೀ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉತ್ತರಪ್ರದೇಶ ಸರ್ಕಾರ ಭದ್ರತೆಯನ್ನು ಹೆಚ್ಚಿಸಿದೆ. ಡ್ರೋಣ್‍ಗಳ ಮೂಲಕ ಕಣ್ಗಾವಲು ಹೆಚ್ಚಿಸಿದ್ದು, ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ. ಉತ್ತರ ಪ್ರದೇಶ ಸರ್ಕಾರವು ಡ್ರೋನ್‍ಗಳ ಮೂಲಕ ಕಣ್ಗಾವಲು ಹೆಚ್ಚಿಸಿದೆ. ರಾಜ್ಯ ಸರ್ಕಾರವು ನಗರದಾದ್ಯಂತ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಲು ಎನ್ವಿಡಿ ಮತ್ತು ಸಿಸಿಟಿವಿ ಕ್ಯಾಮೆರಾಗಳಂತಹ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದೆ.

ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಗಣ್ಯರು ಹಾಗೂ ಸಮಾಜದ ಎಲ್ಲ ವರ್ಗದ ಜನರು ಪಾಲ್ಗೊಳ್ಳಲಿದ್ದಾರೆ. ಜನವರಿ 22 ರಂದು ಭವ್ಯ ಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸಿದ್ಧರಾಗಿದ್ದಾರೆ. ವಾರಾಣಸಿಯ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್‍ರವರು ಜನವರಿ 22 ರಂದು ರಾಮಲಲ್ಲಾ ಅವರ ಮಹಾಮಸ್ತಕಾಭಿಷೇಕದ ಮುಖ್ಯ ವಿವಿಧಾನವನ್ನು ನೆರವೇರಿಸಲಿದ್ದಾರೆ.

ಜನವರಿ 14 ರಿಂದ ಜನವರಿ 22 ರವರೆಗೆ ಅಯೋಧ್ಯೆಯಲ್ಲಿ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತದೆ. ಸಮಾರಂಭದ ದಿನಾಂಕ ಹತ್ತಿರವಾಗುತ್ತಿದ್ದಂತೆ ಅಯೋಧ್ಯೆಯಲ್ಲಿ ರಾಮಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ 500 ವರ್ಷಗಳಿಗೂ ಹೆಚ್ಚು ಕಾಲ ಕಾದಿದ್ದರಿಂದ ರಾಮ ಭಕ್ತರು ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಬಯಸುತ್ತಿದ್ದಾರೆ. ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.

RELATED ARTICLES

Latest News