ಬೆಳಗಾವಿ, ಅ.3- ಜಾತಿಜನಗಣತಿ ವರದಿ ನಮ್ಮಲ್ಲಿ ಸಿದ್ಧವಾಗಿದ್ದು, ಅದು ಶೀಘ್ರವಾಗಿ ಬಿಡುಗಡೆಯಾಗಿ ಜಾರಿಗೆ ಬರಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಲಹೆ ನೀಡಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಆಡಳಿತದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 162 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ಖರ್ಚು ಮಾಡಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿತ್ತು. ಅದು ಸಿದ್ಧವಾಗಿದೆ. ಅದನ್ನು ಅನುಷ್ಠಾನಕ್ಕೆ ತರಬೇಕು ಎಂದು ನಮ್ಮಲ್ಲೂ ವ್ಯಾಪಕ ಒತ್ತಾಯಗಳಿವೆ ಎಂದರು.
ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ
ರಾಜ್ಯಸರ್ಕಾರ ಕೂಡ ಈ ನಿಟ್ಟಿನಲ್ಲಿ ಚರ್ಚೆ ನಡೆಸುತ್ತಿದೆ. ವರದಿ ಜಾರಿಯ ನಂತರ ಜನಸಂಖ್ಯೆಗನುಗುಣವಾಗಿ ಸಮುದಾಯಗಳಿಗೆ ಆದ್ಯತೆ ನೀಡುವುದು, ಬಜೆಟ್‍ನಲ್ಲಿ ಅನುದಾನ ಮೀಸಲಿಡುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲು ಸಹಾಯವಾಗುತ್ತದೆ. ಹೀಗಾಗಿ ವರದಿ ಅನುಷ್ಠಾನದಿಂದ ಲಾಭವಾಗಲಿದೆ ಎಂದು ಹೇಳಿದರು.
ಬಿಹಾರದಲ್ಲಿ ನಿತೀಶ್ ಕುಮಾರ್ ಸರ್ಕಾರ ಜಾತಿ ಆಧಾರಿತ ಸಮೀಕ್ಷಾ ವರದಿಯನ್ನು ಅನುಷ್ಠಾನಕ್ಕೆ ತಂದಿರುವುದು ಉತ್ತಮ ಬೆಳವಣಿಗೆ ಎಂದರು.