Homeರಾಜ್ಯಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

Heavy vehicle traffic banned at Agumbe Ghat

ಶಿವಮೊಗ್ಗ, ಜೂನ್ 12: ಮಳೆ ಹಿನ್ನೆಲೆ ಗುಡ್ಡ ಕುಸಿತದ ಆತಂಕ ಹೆಚ್ಚಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಆಗುಂಬೆ ಘಾಟ್‌ (ರಾಷ್ಟ್ರೀಯ ಹೆದ್ದಾರಿ 169A) ನಲ್ಲಿ ಭಾರಿ ವಾಹನಗಳ ಸಂಚಾರವನ್ನು ಜುಲೈ 15ರವರೆಗೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಶಿವಮೊಗ್ಗದಿಂದ ಹೊಸನಗರ–ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರ ಹಾಗೂ ಉಡುಪಿಗೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ಕೆಲವು ಕಡೆಗಳಲ್ಲಿ ಭೂ ಕುಸಿತದ ಲಕ್ಷಣಗಳು ಕಂಡುಬಂದಿದ್ದು, ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಈ ನಿರ್ಧಾರ ಪ್ರಕಟಿಸಿದೆ.

ಮಳೆ ಪ್ರಮಾಣ ಹೆಚ್ಚಾಗಿರುವ ಕಾರಣ ವಾಹನ ಸಂಚಾರಕ್ಕೂ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣಿಕರ ಹಾಗೂ ವಾಹನ ಚಾಲಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರ್ಯಾಯ ಮಾರ್ಗಗಳು
ಭಾರಿ ವಾಹನಗಳು ಕೆಳಕಂಡ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ:
ತೀರ್ಥಹಳ್ಳಿ – ನಾಗೋಡಿ – ಕೊಲ್ಲೂರು – ಕುಂದಾಪುರ – ಉಡುಪಿ ಮಾರ್ಗ
ತೀರ್ಥಹಳ್ಳಿ – ಶೃಂಗೇರಿ – ಬಜಗೋಳಿ – ಉಡುಪಿ ಮಾರ್ಗ

ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಂತೆ ಮಳೆಗಾಲ ಮುಗಿಯುವವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ. ವಾಹನ ಚಾಲಕರು ಹಾಗೂ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಲಾಗಿದೆ.

RELATED ARTICLES

Latest News