Homeರಾಜ್ಯಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್‌‍ ಹೈವೇಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಅಪಘಾತ, ಯುವತಿ ಸಾವು

ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್‌‍ ಹೈವೇಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಅಪಘಾತ, ಯುವತಿ ಸಾವು

Young woman dies after car hits divider on Bengaluru-Chennai Expressway

ಬೆಂಗಳೂರು,ಜೂ.13- ಅತಿ ವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.ನಗರದ ಅರೆಬಿಕ್‌ ಕಾಲೇಜು ಸಮೀಪದ ಪಿಎನ್‌ಟಿ ಕಾಲೋನಿ ನಿವಾಸಿ ಸಾಜೀಯಾ (28) ಮೃತಪಟ್ಟ ಯುವತಿ.

ಸ್ನೇಹಿತ ತನ್ನ ಬೆಂಜ್‌ ಕಾರಿನಲ್ಲಿ ಸ್ನೇಹಿತೆ ಸಾಜೀಯ ಅವರನ್ನು ಕರೆದುಕೊಂಡು ಹೋಟೇಲ್‌ನಲ್ಲಿ ಊಟ ಮಾಡಲು ದೇವನಹಳ್ಳಿ ಕಡೆಗೆ ರಾತ್ರಿ ಹೋಗಿದ್ದಾರೆ.ಊಟ ಮಾಡಿಕೊಂಡು ವಾಪಸ್‌‍ ತಡರಾತ್ರಿ 12.45 ರ ಸುಮಾರಿನಲ್ಲಿ ವಾಪಸ್‌‍ ನಗರಕ್ಕೆ ಬರುತ್ತಿದ್ದಾಗ ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿಯ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್‌‍ ಹೈವೇಯಲ್ಲಿ ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಅಪ್ಪಳಿಸಿದೆ.

ಪರಿಣಾಮ ಕಾರಿನೊಳಗಿದ್ದ ಸಾಜೀಯಾ ಮೃತಪಟ್ಟಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಸ್ನೇಹಿತ ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಸುದ್ದಿ ತಿಳಿದು ಹೊಸಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಅತಿ ವೇಗ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES
spot_img

Latest News