ನಿತ್ಯ ನೀತಿ : ನಂಬಿಕೆ ಅನ್ನೋ ಪದ ತುಂಬಾನೇ ಪವಿತ್ರವಾದದ್ದು,ಅದನ್ನು ಗೌರವದಿಂದ ಉಳಿಸಿಕೊಳ್ಳಿ. ನಿಮ್ಮ ಅವಶ್ಯಕತೆಗೆ ತಕ್ಕಂತೆ ಬಳಸಿಕೊಳ್ಳಬೇಡಿ.
ಪಂಚಾಂಗ : ಭಾನುವಾರ, 21-06-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ನಿಜ ಜ್ಯೇಷ್ಠ / ಪಕ್ಷ: ಶುಕ್ಲ / ತಿಥಿ: ಸಪ್ತಮಿ / ನಕ್ಷತ್ರ: ಪೂರ್ವಾ / ಯೋಗ: ಸಿದ್ಧಿ / ಕರಣ: ವಿಷ್ಟಿ
ಸೂರ್ಯೋದಯ : ಬೆ.5.55
ಸೂರ್ಯಾಸ್ತ : 06.49
ರಾಹುಕಾಲ : 4.30-6.00
ಯಮಗಂಡ ಕಾಲ : 12.00- 1.30
ಗುಳಿಕ ಕಾಲ : 3.00-4.30
ರಾಶಿ ಭವಿಷ್ಯ
ಮೇಷ: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳ ಬಹುದು. ಆದ್ದರಿಂದ ಜಾಗ್ರತೆಯಿಂದಿರಿ.
ವೃಷಭ: ಮನೆಯ ಜವಾಬ್ದಾರಿಗಳನ್ನು ಪೂರೈಸುವಲ್ಲಿ ಪ್ರೀತಿಪಾತ್ರರ ಸಂಪೂರ್ಣ ಬೆಂಬಲ ಪಡೆಯುತ್ತೀರಿ.
ಮಿಥುನ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.
ಕಟಕ: ಕಾರ್ಯ ಸಾಮರ್ಥ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ಸಿಂಹ: ಹಣದ ವಿಷಯದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಿ.
ತುಲಾ: ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ಯೋಚಿಸಬೇಡಿ.
ವೃಶ್ಚಿಕ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುವ ವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ಧನುಸ್ಸು: ಮಡದಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚು ಗಮನ ಹರಿಸಬೇಕಾಗಬಹುದು.
ಮಕರ: ಬಂಧುಗಳಿಂದ ಸಮಸ್ಯೆ ಎದುರಾಗಲಿದೆ. ಹಿತಶತ್ರುಗಳ ಕಾಟ ಹೆಚ್ಚಾಗಲಿದೆ.
ಕುಂಭ: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮೀನ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
