ಬೆಂಗಳೂರು,ಜ.28- ಹಿಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ 224ಕ್ಕೆ ಅಷ್ಟೂ ಸ್ಥಾನಗಳನ್ನೂ ಗೆಲ್ಲುವುದಾಗಿಯೇ ಹೇಳಿಕೊಳ್ಳುತ್ತಿತ್ತು. ಆದರೆ ಎಷ್ಟು ಗೆದ್ದಿದೆ ಎಂದು ಗೊತ್ತಿದೆ. ಈಗಲೋಕಸಭೆಯಲ್ಲಿ 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅದಕ್ಕೆ ನಾವೇಕೆ ಅಡ್ಡಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ದೇಶದ 543 ಲೋಕಸಭಾ ಸ್ಥಾನಗಳನ್ನೂ ಗೆದ್ದುಕೊಳ್ಳಲಿ. ಬೇಡ ಎಂದು ಯಾರೂ ಹೇಳಿಲ್ಲ. ಆದರೆ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ನಾಯಕರುಗಳ ಹೇಳಿಕೆಗಳನ್ನು ಸ್ವಲ್ಪ ಗಮನಿಸಿದರೆ ಅರ್ಥವಾಗುತ್ತದೆ. ಕಾಂಗ್ರೆಸ್ ಎಂದಿಗೂ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಹೇಳಿಕೊಂಡಿರಲಿಲ್ಲ. ನಾವು 136 ಸ್ಥಾನಗಳಿಂದ 140 ಸ್ಥಾನಗಳನ್ನು ಗುರಿಯಾಗಿಟ್ಟುಕೊಂಡಿದ್ದೆವು. ಅದನ್ನು ಸಾಧಿಸಿದ್ದೇವೆ. ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಯವರ ಅತ್ಯುತ್ಸಾಹಕ್ಕೆ ನಾವು ಅಡ್ಡಿಪಡಿಸುವುದಿಲ್ಲ ಎಂದರು.
ದಯಾಮರಣ ಕೋರಿ ಸುಪ್ರೀಂ ಮೆಟ್ಟಿಲೇರಲು ಸಿದ್ದವಾದ ಕೇರಳ ಕುಟುಂಬ
ನಿಗಮ ಮಂಡಳಿಗೆ ನೇಮಕವಾಗಿರುವ ಎಲ್ಲಾ ಅಧ್ಯಕ್ಷರ ಅಕಾರವ 2 ವರ್ಷಗಳು ಮಾತ್ರ ಎಂದು ಅವರು ಸ್ಪಷ್ಟಪಡಿಸಿದರು. ನಿಗಮ ಮಂಡಳಿ ಅಧಿಕಾರವಯನ್ನು ಎರಡು ವರ್ಷ ಮೀಸಲಿಗೆ ಒಂದಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು. ಆದ ಕಾರಣ 2 ವರ್ಷ ಮಾತ್ರ ಅಧಿಕಾರವ ಎಂದು ಹೇಳಿದ್ದೇವೆ. ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ.
ಇಲ್ಲಿ ಸಿದ್ದರಾಮಯ್ಯ ಅವರದ್ದು ಏನೂ ಇಲ್ಲ, ಡಿ.ಕೆ.ಶಿವಕುಮಾರ್ ಅವರದ್ದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು. ಬಿಹಾರದಲ್ಲಿ ಜೆಡಿಯು ಹೊರಬರುತ್ತಿದೆ ಎಂದಾಗ ನೀವೆ ಈ ವಿಚಾರವಾಗಿ ಹೇಳುತ್ತಿದ್ದೀರಿ. ಮುಂದೆ ಏನಾಗುತ್ತದೆ ನೋಡೋಣ ಎಂದು ಹೇಳಿದರು.