Homeರಾಷ್ಟ್ರೀಯಪ್ರೀತಿ ಕೊಂದ ಕೊಲೆಗಾರ್ತಿ : ಸಿನಿಮಾವನ್ನೇ ಮೀರಿಸುವಂತಿದೆ ಈ ಸ್ಟೋರಿ

ಪ್ರೀತಿ ಕೊಂದ ಕೊಲೆಗಾರ್ತಿ : ಸಿನಿಮಾವನ್ನೇ ಮೀರಿಸುವಂತಿದೆ ಈ ಸ್ಟೋರಿ

Passport trick, 3 dates, final push: Chilling plot behind Lohagad fort murder

ಪುಣೆ, ಜೂ.24- ಪ್ರಿಯಕರನೊಂದಿಗೆ ಶಾಮೀಲಾದ ಯುವತಿಯೊಬ್ಬಳು ತಾನು ಕೈ ಹಿಡಿಯಬೇಕಿದ್ದ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಸಿನಿಮೀಯ ರೀತಿಯಲ್ಲಿ ಕೊಲೆ ಮಾಡಿರುವ ಘಟನೆ ನಡೆದಿದೆ. ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಈ ವರ್ಷದ ಕೊನೆಯಲ್ಲಿ ಭರ್ಜರಿಯಾಗಿ ಮದುವೆಯಾಗಬೇಕಿದ್ದ ರಿಯಲ್‌ ಎಸ್ಟೆಟ್‌ ಉದ್ಯಮಿ ಕೇತನ್‌ ಅಗರ್ವಾಲ್‌ ಭಾವಿ ಪತ್ನಿ ಸಿಯಾ ಗೋಯಲ್‌‍ ಸಂಚಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಅಕಸ್ಮಿಕವಾಗಿ ಕಂದಕಕ್ಕೆ ಬಿದ್ದು ಸಾವು ಎಂದು ಬಿಂಬಿಸಲು ಯತ್ನಿಸಿದ್ದ ಸಿಯಾ ಮತ್ತು ಆಕೆಯ ಪ್ರಿಯಕರ ಚೇತನ್‌ ಚೌಧರಿ (22) ಅವರ ಕ್ರೂರ ಮುಖವಾಡ ಇದೀಗ ಕಳಚಿ ಬಿದ್ದಿದೆ. ಈ ಹಿಂದೆ ಕೂಡ ಸಿಯಾ ಕೇತನ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ್ದಳು. ಅದು ಯಶಸ್ವಿಯಾಗದಿದ್ದಾಗ ಹಾವು ಹಾವು ಎಂದು ಕಿರುಚಿಕೊಂಡು ಸಿಕ್ಕಿ ಹಾಕಿಕೊಳ್ಳುವುದರಿಂದ ಬಚಾವ್‌ ಆಗಿದ್ದಳು.

ಇಬ್ಬರೂ ವಿವಾಹಪೂರ್ವ ಪ್ರವಾಸಕ್ಕಾಗಿ ಬಾಲಿಗೆ ಹೋಗಲು ವಿಮಾನ ನಿಲ್ದಾಣಕ್ಕೆ ತಲುಪಿದ್ದರು. ಆದರೆ ಅಲ್ಲಿ ಹಠಾತ್‌ ಆಗಿ ಕೇತನ್‌ನ ಪಾಸ್‌‍ಪೋರ್ಟ್‌ ನಾಪತ್ತೆಯಾಗಿತ್ತು ಇದರಿಂದ ಪ್ರವಾಸ ರದ್ದಾಗಿ ಇಬ್ಬರೂ ಮನೆಗೆ ಮರಳಿದ್ದರು.

ಪ್ರವಾಸ ರದ್ದಾದ ಮೂರನೇ ದಿನ ಸಿಯಾ ಜಗಳವಾಡಿ, ತನ್ನೊಂದಿಗೆ ಲೋಹಗಡ್‌ ಕೋಟೆಗೆ ಬರುವಂತೆ ಕೇತನ್‌ನನ್ನು ಒಪ್ಪಿಸಿದಳು. ಕೋಟೆಯ ಮೇಲೆ ಇಬ್ಬರೇ ಇದ್ದಾಗ ಸಿಯಾ ಕೇತನ್‌ನನ್ನು ಕೆಳಗೆ ತಳ್ಳಿದ್ದಳು ಆದರೆ, ಕೇತನ್‌ ಪೊದೆ ಹಿಡಿದು ಪ್ರಾಣ ಉಳಿಸಿಕೊಂಡಾಗ ಹಾವು ಬಂತು ಹೀಗಾಗಿ ತಳ್ಳಿದೆ ಎಂದು ನಾಟಕವಾಡಿ ಬಚಾವ್‌ ಆಗಿದ್ದಾಳಂತೆ.

ಅಂದು ಕೇತನ್‌ ತನ್ನ ಭಾವಿ ಪತ್ನಿಯ ಕುತಂತ್ರವನ್ನು ಅರಿಯದೆ ಆಕೆಯನ್ನು ನಂಬಿಬಿಟ್ಟಿದ್ದ. ಸಿಯಾ ತನ್ನ ಬೇಕರಿ ವ್ಯವಹಾರದ ಸಂಪರ್ಕದ ಮೂಲಕ ಪರಿಚಯವಾಗಿದ್ದ ಡ್ರೈ ಫ್ರೂಟ್‌್ಸ ಕಂಪನಿ ಮಾಲೀಕ ಚೇತನ್‌ ಚೌಧರಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ತಮಗೆ ಅಡ್ಡಿಯಾಗಿದ್ದ ಕೇತನ್‌ನನ್ನು ಮುಗಿಸಲು ಇಬ್ಬರೂ ಸ್ಕೆಚ್‌ ಹಾಕಿದ್ದರು.

ಸಿಯಾ ಮತ್ತೆ ಕೇತನ್‌ನನ್ನು ವಿಹಾರದ ನೆಪದಲ್ಲಿ ಲೋಹಗಡ್‌ ಕೋಟೆಗೆ ಕರೆದೊಯ್ದಳು. ಮೊದಲೇ ಪ್ಲಾನ್‌ ಮಾಡಿದಂತೆ ಆಕೆಯ ಪ್ರಿಯಕರ ಚೇತನ್‌ ಕೂಡ ಅಲ್ಲಿಗೆ ಬಂದಿದ್ದ. ಬಿರುಗಾಳಿ ಬೀಸುತ್ತಿದ್ದ ಸಮಯದಲ್ಲಿ ಇಬ್ಬರೂ ಸೇರಿ ಕೇತನ್‌ನನ್ನು ಕೋಟೆಯ ತುದಿಯಿಂದ 400 ಅಡಿ ಆಳದ ಕಂದಕಕ್ಕೆ ತಳ್ಳಿದ್ದಾರೆ. ತೀವ್ರವಾಗಿ ಗಾಯಗೊಂಡ ಕೇತನ್‌ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಕಳ್ಳಾಟ ಬಯಲು ಮಾಡಿದ್ದೇಗೆ?ಕೊಲೆಯ ಬಳಿಕ ಸಿಯಾ ಪೊಲೀಸರ ಮುಂದೆ, ಕೋಟೆಯ ಮೇಲೆ ಜೋರಾಗಿ ಗಾಳಿ ಬೀಸುತ್ತಿತ್ತು, ಆಗ ಕೇತನ್‌ ಕಾಲು ಜಾರಿ ಆಕಸ್ಮಿಕವಾಗಿ ಬಿದ್ದರು ಎಂದು ಕಣ್ಣೀರು ಹಾಕಿದ್ದಳು. ಪೊಲೀಸರು ಮೊದಲು ಆಕಸ್ಮಿಕ ಸಾವು ಎಂದು ಕೇಸ್‌‍ ದಾಖಲಿಸಿದ್ದರು. ಆದರೆ, ಕೇತನ್‌ ತಂದೆಯ ಅನುಮಾನ ಮತ್ತು ಸ್ಥಳೀಯ ಅಪರಾಧ ವಿಭಾಗದ ತನಿಖೆಯ ವೇಳೆ ಚೇತನ್‌ ಸಿಕ್ಕಿಬಿದ್ದಿದ್ದಾನೆ.

ಪೊಲೀಸರು ಚೇತನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತ ಇಡೀ ಕೊಲೆ ಸಂಚನ್ನು ಒಪ್ಪಿಕೊಂಡಿದ್ದಾನೆ. ಆ ಮಾಹಿತಿಯ ಆಧಾರದ ಮೇಲೆ ಸಿಯಾಳನ್ನು ಕೂಡ ಬಂಧಿಸಲಾಗಿದೆ.ಪುಣೆ ಗ್ರಾಮೀಣ ಪೊಲೀಸ್‌‍ ವರಿಷ್ಠಾಧಿಕಾರಿ ಸಂದೀಪ್‌ ಸಿಂಗ್‌ ಗಿಲ್‌ ಪ್ರಕಾರ, ಕೋರ್ಟ್‌ ಇಬ್ಬರೂ ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸ್‌‍ ಕಸ್ಟಡಿಗೆ ಒಪ್ಪಿಸಿದೆ. ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES

Latest News