Homeರಾಜ್ಯತುಂಗಭದ್ರಾ ಜಲಾಶಯದ ನವೀಕೃತ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ

ತುಂಗಭದ್ರಾ ಜಲಾಶಯದ ನವೀಕೃತ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ

Tungabhadra Dam's renovated crust gates inaugurated

ಬೆಂಗಳೂರು, ಜೂ. 25- ತುಂಗಭದ್ರಾ ಅಣೆಕಟ್ಟೆಯ ನವೀಕೃತ ಕ್ರಸ್ಟ್‌ ಗೇಟ್‌ಗಳನ್ನು ಇಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌.ಪಾಟೀಲ್‌ ಲೋಕಾರ್ಪಣೆ ಮಾಡಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ರೇವಂತರೆಡ್ಡಿ, ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ರಾಜ್ಯ ಜಲಸಂಪನೂಲ ಸಚಿವ ರಾಮಲಿಂಗಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

2024ರ ಆಗಸ್ಟ್‌ ನಲ್ಲಿ ತುಂಗಭದ್ರಾ ಅಣೆಕಟ್ಟೆಯ ಕ್ರಸ್ಟ್‌ ಗೇಟ್‌ ಸಂಖ್ಯೆ-19 ಹಾನಿಗೊಳಗಾಗಿತ್ತು. ತುರ್ತು ಕಾಮಗಾರಿ ಕೈಗೊಂಡು 19ನೇ ಕ್ರಸ್ಟ್‌ ಗೇಟ್‌ ಅನ್ನು ದುರಸ್ಥಿ ಮಾಡಲಾಗಿತ್ತು. ಉಳಿದ 32 ಕ್ರಸ್ಟ್‌ ಗೇಟ್‌ಗಳು ಸುಸ್ಥಿತಿಯಲ್ಲಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಎಲ್ಲಾ ಕ್ರಸ್ಟ್‌ ಗೇಟ್‌ಗಳನ್ನು ಬದಲಾವಣೆ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು.

ಆಗ ಜಲಸಂಪನೂಲ ಸಚಿವರು ಹಾಗೂ ಉಪ ಮುಖ್ಯಮಂತ್ರಿಯಾಗಿದ್ದ ಡಿ.ಕೆ.ಶಿವಕುಮಾರ್‌ ಕ್ರಸ್ಟ್‌ ಗೇಟ್‌ಗಳ ಬದಲಾವಣೆಗೆ ನಿರ್ಧಾರ ಕೈಗೊಂಡರು. ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಅದಕ್ಕೆ ಕೈ ಜೋಡಿಸಿದರು. ನಿಗದಿತ ವೇಳಾಪಟ್ಟಿಯಂತೆ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ಅವುಗಳನ್ನು ಉದ್ಘಾಟಿಸಲಾಗುತ್ತಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದಾರೆ.

RELATED ARTICLES

Latest News