Homeಕ್ರೀಡಾ ಸುದ್ದಿವಿವಾಹಿತ ಮಹಿಳೆಗಾಗಿ ಲಾಂಗು-ಮಚ್ಚಿನಿಂದ ಬಡಿದಾಡಿಕೊಂಡ ಇಬ್ಬರು : ಒಬ್ಬನ ಕೈ ಕಟ್

ವಿವಾಹಿತ ಮಹಿಳೆಗಾಗಿ ಲಾಂಗು-ಮಚ್ಚಿನಿಂದ ಬಡಿದಾಡಿಕೊಂಡ ಇಬ್ಬರು : ಒಬ್ಬನ ಕೈ ಕಟ್

Two men fought over a married woman : One's hand was cut off

ಚಿಕ್ಕಮಗಳೂರು,ಜೂ.25- ವಿವಾಹಿತ ಮಹಿಳೆಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿದ್ದು, ವ್ಯಕ್ತಿಯೊಬ್ಬನ ಕೈ ಹಸ್ತ ಸಂಪೂರ್ಣವಾಗಿ ಕತ್ತರಿಸಿರುವ ಘಟನೆ ಜಿಲ್ಲೆಯ ಎನ್‌ಆರ್‌.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ.

ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ ಹಾಗೂ ಅರುಣ್‌ ನಡುವೆ ತೀವ್ರ ಗಲಾಟೆ ನಡೆದಿದೆ. ಈ ಜಗಳ ವಿಕೋಪಕ್ಕೆ ತಿರುಗಿದಾಗ ಶೇಷಗಿರಿ ಎಂಬಾತ ಅರುಣ್‌ನ ಮೇಲೆ ಏಕಾಏಕಿ ಲಾಂಗ್‌ನಿಂದ ದಾಳಿ ನಡೆಸಿದ್ದಾನೆ. ಶೇಷಗಿರಿ ಬೀಸಿದ ಲಾಂಗ್‌ನಿಂದ ತಪ್ಪಿಸಿಕೊಳ್ಳಲು ಅರುಣ್‌ ತನ್ನ ಕೈಯನ್ನು ಅಡ್ಡ ಕೊಟ್ಟಿದ್ದು, ಈ ವೇಳೆ ಅರುಣ್‌ನ ಹಸ್ತ ಸಂಪೂರ್ಣವಾಗಿ ಕತ್ತರಿಸಿ ತುಂಡಾಗಿದೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಅರುಣ್‌ನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಗಾಯ ಅತ್ಯಂತ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಮಂಗಳೂರಿಗೆ ರವಾನಿಸಲಾಗಿದೆ. ಈ ಭೀಕರ ಕತ್ಯಕ್ಕೆ ಸಂಬಂಧಿಸಿದಂತೆ ಬಾಳೆಹೊನ್ನೂರು ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES
spot_img

Latest News