Friday, November 22, 2024
Homeರಾಷ್ಟ್ರೀಯ | Nationalಡೀಪ್ ಟೆಕ್ ಬಲವರ್ಧನೆಗೆ ಹೊಸ ಯೋಜನೆ

ಡೀಪ್ ಟೆಕ್ ಬಲವರ್ಧನೆಗೆ ಹೊಸ ಯೋಜನೆ

ನವದೆಹಲಿ, ಫೆ 1 (ಪಿಟಿಐ) ರಕ್ಷಣಾ ವಲಯಕ್ಕೆ ಡೀಪ್ ಟೆಕ್ ಅನ್ನು ಬಲಪಡಿಸಲು ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

2024-25 ರ ಮಧ್ಯಂತರ ಬಜೆಟ್ ಅನ್ನು ಪ್ರಸ್ತುತಪಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೊಯ್ಲಿನ ನಂತರದ ಕೃಷಿ ಚಟುವಟಿಕೆಗಳಲ್ಲಿ ಸರ್ಕಾರವು ಸಾರ್ವಜನಿಕ ಮತ್ತು ಖಾಸಗಿ ಹೂಡಿಕೆಯನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.

ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್‍ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ

ಕೃಷಿ-ಹವಾಮಾನ ವಲಯಗಳಲ್ಲಿ ವಿವಿಧ ಬೆಳೆಗಳ ಮೇಲೆ ನ್ಯಾನೊ ಡಿಎಪಿ ಅಳವಡಿಕೆಯನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದರು. ಸಿಮೆಂಟ್ ಸೇರಿದಂತೆ ಮೂರು ಪ್ರಮುಖ ರೈಲ್ವೆ ಕಾರಿಡಾರ್‍ಗಳನ್ನು ನಿರ್ಮಿಸಲಾಗುವುದು ಮತ್ತು 40,000 ಸಾಮಾನ್ಯ ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತಿಸಲಾಗುವುದು ಎಂದು ಹಣಕಾಸು ಸಚಿವರು ಹೇಳಿದರು.

RELATED ARTICLES

Latest News