Friday, May 17, 2024
Homeರಾಷ್ಟ್ರೀಯಸೊರೆನ್ ಬಂಧನ ವಿಚಾರದಲ್ಲಿ ಮಧ್ಯ ಪ್ರವೇಶಿಸದಿರಲು ಸುಪ್ರೀಂ ತೀರ್ಮಾನ

ಸೊರೆನ್ ಬಂಧನ ವಿಚಾರದಲ್ಲಿ ಮಧ್ಯ ಪ್ರವೇಶಿಸದಿರಲು ಸುಪ್ರೀಂ ತೀರ್ಮಾನ

ನವದೆಹಲಿ, ಫೆ.2 (ಪಿಟಿಐ) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‍ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿರುವ ಮನವಿಯಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂಎಂ ಸುಂದ್ರೇಶ್ ಮತ್ತು ಬೇಲಾ ಎಂ ತ್ರಿವೇದಿ ಅವರಿದ್ದ ಪೀಠವು ಸೊರೆನ್ ಪರ ಹಾಜರಿದ್ದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಸಿಂಘ್ವಿ ಅವರಿಗೆ ಪರಿಹಾರಕ್ಕಾಗಿ ಹೈಕೋರ್ಟ್ ಮೊರೆ ಹೋಗುವಂತೆ ಸೂಚಿಸಿದೆ.

ತಮ್ಮ ಸನ್ನಿಹಿತ ಬಂಧನದ ಹಿನ್ನೆಲೆಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗಿದ್ದ ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ ಮನವಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಸಂಯೋಜಿತ ಪಿತೂರಿಯ ಭಾಗವಾಗಿ ಬಂಧಿಸಿದೆ ಎಂದು ಆರೋಪಿಸಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವುದರಿಂದ ಕೇಂದ್ರ ಸರ್ಕಾರ ತನ್ನ ಬಂಧನವನ್ನು ಅನಧಿಕೃತ, ಅನಿಯಂತ್ರಿತ ಮತ್ತು ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಘೋಷಿಸುವಂತೆ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ ಮನವಿಯಲ್ಲಿ ಸೊರೆನ್ ಒತ್ತಾಯಿಸಿದ್ದರು.

ಮತ್ತೆ ಇಡಿ ವಿಚಾರಣೆಗೆ ಗೈರಾದ ಕೇಜ್ರಿವಾಲ್

ಜ. 31 ರಂದು ಸೋರೆನ್ ಅವರನ್ನು ಬಂಧಿಸಲಾಗಿದೆ. ಮನೀ ಲಾಂಡರಿಂಗ್ ಪ್ರಕರಣದಲ್ಲಿ ಅಕ್ರಮ ಭೂಮಿಯನ್ನು ಹೊಂದಿರುವ ಮತ್ತು ಭೂ ಮಾಫಿಯಾ ಜೊತೆಗಿನ ಸಂಬಂಧವನ್ನು ಸೊರೆನ್ ವಿರುದ್ಧ ಹೊರಿಸಲಾಗಿದೆ. ರಾಂಚಿಯ ವಿಶೇಷ ಪಿಎಂಎಲ್‍ಎ ನ್ಯಾಯಾಲಯ ಸೊರೆನ್ ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

RELATED ARTICLES

Latest News