Friday, November 22, 2024
Homeರಾಜ್ಯಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು,ಫೆ.2- ಜಾರ್ಖಾಂಡ್‍ನಲ್ಲಿನ ಮುಖ್ಯ ಮಂತ್ರಿ ಹೇಮಂತ್ ಸೊರೇನ್‍ರವರನ್ನು ಇಡಿ ಅಕಾರಿಗಳು ಬಂಸಿದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಕೆಂಡ ಕಾರಿದ್ದಾರೆ.ಕೇಂದ್ರ ತನಿಖಾ ದಳ, ಜಾರಿ ನಿರ್ದೇಶಾನಲಯ, ಆದಾಯ ತೆರಿಗೆ ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ. ಅದು ಬಿಜೆಪಿಯ ಅಂಗಸಂಸ್ಥೆಗಳಂತೆ ಕಾರ್ಯ ನಿರ್ವಹಿಸುತ್ತಿವೆ ಎಂದು ಆರೋಪಿಸಿದ್ದಾರೆ.

2014 ರಿಂದ ಕಳೆದ ಹತ್ತು ವರ್ಷಗಳಲ್ಲಿ ಜಾರಿ ನಿರ್ದೇಶನಾಲಯ ವಿಪಕ್ಷ ನಾಯಕರ ವಿರುದ್ಧ 115 ಪ್ರಕರಣಗಳನ್ನು ದಾಖಲಿಸಿದೆ. ಆಡಳಿತ ಪಕ್ಷ ಬಿಜೆಪಿಯ ಆರು ಮಂದಿ ವಿರುದ್ಧ ಮಾತ್ರ ಪ್ರಕರಣಗಳನ್ನು ದಾಖಲಿಸಲಾಗಿದೆ. ಒಟ್ಟು ದಾಖಲಾದ ಪ್ರಕರಣಗಳಲ್ಲಿ ಶೇ. 95 ರಷ್ಟು ವಿಪಕ್ಷ ನಾಯಕರನ್ನೇ ಗುರಿ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.

ಮತ್ತೊಂದು ಜೀವ ಬಲಿ ಪಡೆದ ಕಿಲ್ಲರ್ ಬಿಎಂಟಿಸಿ, ವಿದ್ಯಾರ್ಥಿನಿ ಸಾವು

ಬಿಜೆಪಿ ಸರ್ಕಾರದ ಸ್ವಾರ್ಥ ರಾಜಕೀಯ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣೆಸÀಬೇಕಿರುವುದು ಮಾತ್ರವಲ್ಲ. ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅವಸಾನದ ಹಾದಿಯತ್ತ ಸರಿಯುತ್ತಿದೆ ಎಂದು ಎಚ್ಚರಿಸಿದ್ದಾರೆ.

RELATED ARTICLES

Latest News