ಜೈಪುರ, ಜು.1-ದೆಹಲಿ-ಮುಂಬೈ ಎಕ್‌್ಸಪ್ರೆಸ್‌ವೇಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್‌ಗೆ ಬೆಂಕಿ ತಗುಲಿ 8 ಮಂದಿ ಮೃತಪಟ್ಟಿದ್ದಾರೆ. ರಾಜಸ್ಥಾನದ ದೌಸಾ ಜಿಲ್ಲೆ ಕೋಲ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಧನಾವಡಾ ಸಮೀಪ ಈ ದುರಂತ ನಡೆದಿದ್ದು ,ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರಲ್ಲಿ ಐವರು ಬಸ್‌ನಲ್ಲೇ ಸಜೀವ ದಹನವಾಗಿದ್ದು ಇಬ್ಬರು ತಲೆಗೆ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗು ಮತ್ತೋಬ್ಬರು ಆಸ್ಪತ್ರೆಗೆ ಸಾಗಿಸಿದ ಬಳಿಕ ಸುಟ್ಟ ಗಾಯಗಳಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ದೌಸಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ದೀಕ್ಷಿತ್ ತಿಳಿಸಿದ್ದಾರೆ.
ಹನ್‌್ಸ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಈ ಬಸ್ ಋಷಿಕೇಶ್‌ನಿಂದ ಇಂದೋರ್‌ಗೆ ತೆರಳುತ್ತಿತ್ತು. ದೆಹಲಿ-ಮುಂಬೈ ಎಕ್‌್ಸಪ್ರೆಸ್‌ವೇಯಲ್ಲಿ ಮುಂದೆ ಸಾಗುತ್ತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತು. ಇದರಿಂದ ಪ್ರಯಾಣಿಕರಲ್ಲಿ ಆತಂಕ ಉಂಟಾಯಿತು ಎಂದು ಎಸ್‌ಪಿ ತಿಳಿಸಿದ್ದಾರೆ.
ಗಾಯಗೊಂಡ 24 ಮಂದಿಯನ್ನು ದೌಸಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ತಲೆಗೆ ತೀವ್ರ ಗಾಯವಾಗಿ ಮೃತಪಟ್ಟ ಇಬ್ಬರಲ್ಲಿ ಒಬ್ಬರನ್ನು ಧರ್ಮೇಂದ್ರಎಂದು ಗುರುತಿಸಲಾಗಿದ್ದು, ಉಳಿದ ಮೃತರ ಗುರುತು ಪತ್ತೆ ಮಾಡುವ ಕಾರ್ಯ ಮುಂದುವರಿದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಲಾಲ್ ತಿಳಿಸಿದ್ದಾರೆ. ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯ ಆಡಳಿತದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ರಕ್ಷಣಾ ಕಾರ್ಯಾಚರಣೆ ನಡೆಸಿದರು.
