Friday, November 22, 2024
Homeರಾಷ್ಟ್ರೀಯ | Nationalಮುಂದಿನ ವಾರದಿಂದ 29 ರೂ.ಗೆ ಸಿಗಲಿದೆ ಭಾರತ್ ಬ್ರಾಂಡ್ ಅಕ್ಕಿ

ಮುಂದಿನ ವಾರದಿಂದ 29 ರೂ.ಗೆ ಸಿಗಲಿದೆ ಭಾರತ್ ಬ್ರಾಂಡ್ ಅಕ್ಕಿ

ನವದೆಹಲಿ,ಫೆ.3- ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿ ರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನ ವಾರದಿಂದಲೇ ಭಾರತ್ ಬ್ರ್ಯಾಂಡ್ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೇ ಸಗಟು ಖರೀದಿದಾರರು ತಮ್ಮ ಬಳಿ ಹೊಂದಿರುವ ಅಕ್ಕಿ ಸಂಗ್ರಹದ ಪ್ರಮಾಣವನ್ನೂ ಬಹಿರಂಗಪಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಈ ಬಗ್ಗೆ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ ಮಾತನಾಡಿದ್ದು, ಕಳೆದ ಒಂದು ವರ್ಷದಲ್ಲಿ ಚಿಲ್ಲರೆ ಮತ್ತು ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಶೇ.15ರಷ್ಟು ಹೆಚ್ಚಳವಾಗಿದೆ. ವಿವಿಧ ಮಾದರಿಯ ಅಕ್ಕಿ ರಫ್ತಿನ ಮೇಲೆ ನಿಯಂತ್ರಣ ಹೇರಿದ್ದರೂ ದರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಕೇಂದ್ರ ಸರ್ಕಾರವೇ ಮುಂದಿನ ವಾರದಿಂದ ಜಾರಿಗೆ ಬರುವಂತೆ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ ಅಕ್ಕಿಗೆ 29 ರೂ. ನಂತೆ ಮಾರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ತಾಜ್‍ಮಹಲ್‍ನಲ್ಲಿ ಉರುಸ್ ಆಚರಣೆ ಪ್ರಶ್ನಿಸಿದ ಹಿಂದೂ ಮಹಾಸಭಾ

ಈಗಾಗಲೇ ಭಾರತ್ ಬ್ರ್ಯಾಂಡ್ ಗೋದಿ ಹಿಟ್ಟು ಮತ್ತು ಕಡಲೆ ಬೇಳೆ ಮಾರಾಟವಾಗುತ್ತಿದೆ. ಗೋದಿ ಹಿಟ್ಟು ಪ್ರತಿ ಕೆ.ಜಿಗೆ 27.50 ರೂ. ಕಡಲೆ ಬೇಳೆ ಪ್ರತಿ ಕೆ.ಜಿಗೆ 60 ರೂ.ಗಳಿಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಅಕ್ಕಿಯೂ ಮಾರಾಟವಾಗಲಿದೆ. ಪ್ರತಿ ಕೆಜಿ ಅಕ್ಕಿಗೆ 29 ರೂ. ನಿಗದಿಪಡಿಸಲಾಗಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕೆಟ್‍ಗಳಲ್ಲಿ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಭಾರತ್ ರೈಸ್ ಮೊಬೈಲ್ ವ್ಯಾನ್‍ಗಳು ಮತ್ತು ಮೂರು ಕೇಂದ್ರ ಸಹಕಾರ ಏಜೆನ್ಸಿಗಳ ಮಳಿಗೆಗಳಿಂದ ಗ್ರಾಹಕರು ಖರೀದಿಸಬಹುದು. ಇದು ಶೀಘ್ರದಲ್ಲೇ ಇ-ಕಾಮರ್ಸ್ ಪ್ಲಾಟ್‍ಫಾರ್ಮ್‍ಗಳು ಸೇರಿದಂತೆ ಇತರ ಚಿಲ್ಲರೆ ಸರಪಳಿಗಳ ಮೂಲಕವೂ ಲಭ್ಯವಾಗಲಿದೆ ಎಂದು ಸಚಿವಾಲಯ ತಿಳಿಸಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಬೆಲೆಗಳನ್ನು ನಿಯಂತ್ರಿಸಲು ಮತ್ತು ದೇಶದಲ್ಲಿ ಸುಲಭವಾಗಿ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಗೋಯ ದಾಸ್ತಾನುಗಳ ಮೇಲೂ ನಿಗಾವಹಿಸಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಗೋಧಿಯ ಅಖಿಲ ಭಾರತ ಸರಾಸರಿ ದೇಶೀಯ ಸಗಟು ಮತ್ತು ಚಿಲ್ಲರೆ ಬೆಲೆಯು ಒಂದು ತಿಂಗಳು ಮತ್ತು ವರ್ಷದಲ್ಲಿ ಇಳಿಕೆಯ ಪ್ರವೃತ್ತಿ ಕಂಡಿದೆ ಎಂದು ಅದು ಹೇಳಿದೆ. ಗೋ ಹಿಟ್ಟಿನ ಬೆಲೆಗಳು ಸಹ ಒಂದು ವಾರ, ತಿಂಗಳು ಮತ್ತು ವರ್ಷದಲ್ಲಿ ಕಡಿಮೆಯಾಗುವ ಪ್ರವೃತ್ತಿಯನ್ನು ತೋರಿಸುತ್ತಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಪಾಕ್ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದ ಹಿಂದೂಗಳು

ಎಲ್ಲಲ್ಲಿ ಮಾರಾಟ:?
ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ , ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ ಹಾಗೂ ಕೇಂದ್ರೀಯ ಭಂಡಾರಗಳು ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಅಕ್ಕಿ ಮಾರಾಟಕ್ಕೆ ನಿರ್ಧರಿಸಿದೆ. ಮೊದಲ ಹಂತದಲ್ಲಿ ಚಿಲ್ಲರೆ ಮಾರುಕಟ್ಟೆಗೆ 5 ಲಕ್ಷ ಟನ್‍ಗಳಷ್ಟು ಅಕ್ಕಿಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಐದು ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಭಾರತ್ ರೈಸ್ ಬ್ರ್ಯಾಂಡ್‍ನಡಿ ಮೂರು ಏಜೆನ್ಸಿಗಳಾದ ನಾಫೆಡ್, ಎನ್‍ಸಿಸಿಎಫ್ ಮತ್ತು ಕೇಂದ್ರೀಯ ಭಂಡಾರ್ ಮೂಲಕ ಚಿಲ್ಲರೆ ಮಾರಾಟಕ್ಕೆ ಹಂಚಿಕೆ ಮಾಡಲಾಗಿದೆ. ಭಾರತ್ ರೈಸ್‍ನ ಚಿಲ್ಲರೆ ದರವನ್ನು ಕಿಲೋಗೆ 29 ರೂ.ಗೆ ನಿಗದಿಪಡಿಸಲಾಗಿದೆ ಮತ್ತು ಅವುಗಳನ್ನು 5 ಕೆಜಿ ಮತ್ತು 10 ಕೆಜಿ ಪ್ಯಾಕ್‍ಗಳಲ್ಲಿ ಮಾರಾಟ ಮಾಡಲಾಗುತ್ತದೆ.

RELATED ARTICLES

Latest News