ಬೆಂಗಳೂರು, ಜು.2- ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಮೇಲನವಿ ನ್ಯಾಯಾಧಿಕರಣ ಅಧ್ಯಕ್ಷರಾಗಿರುವ ಹರ್ಷಗುಪ್ತ ಅವರನ್ನು ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಜೊತೆಗೆ ನ್ಯಾಯಾಧಿಕರಣದ ಅಧ್ಯಕ್ಷ ಸ್ಥಾನದಲ್ಲೂ ಮುಂದುವರೆಸಿದೆ.
ಕಾರ್ಮಿಕ ಇಲಾಖೆ ಆಯುಕ್ತರಾಗಿದ್ದ ಡಾ.ಎಚ್.ಎನ್. ಗೋಪಾಲಕೃಷ್ಣ ಅವರನ್ನು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರನ್ನಾಗಿ, ಹುದ್ದೆಯ ನಿರೀಕ್ಷೆಯಲ್ಲಿದ್ದ ಡಾ.ಆರ್.ರಾಧಾಪ್ರಿಯ ಅವರನ್ನು ಕಾರ್ಮಿಕ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಹುದ್ದೆಯ ನಿರೀಕ್ಷೆಯಲ್ಲಿದ್ದ ಮತ್ತೊಬ್ಬ ಐಎಎಸ್ ಅಧಿಕಾರಿ ಡಾ.ಕೆ.ಹರೀಶ್ಕುಮಾರ್ ಅವರನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
