Homeರಾಷ್ಟ್ರೀಯಚಿಪ್ಸ್ ಆಸೆ ತೋರಿಸಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಚಿಪ್ಸ್ ಆಸೆ ತೋರಿಸಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಶಾಮ್ಲಿ, ಜು. 6 (ಪಿಟಿಐ) ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಕುಟುಂಬ ನೀಡಿದ ದೂರಿನ ಪ್ರಕಾರ, ಭಾನುವಾರ ಆಕೆ ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ ಇಬ್ಬರು ಬಾಲಕರು ಆಕೆಯ ಬಳಿಗೆ ಬಂದರು.ಅವರು ಆಕೆಯನ್ನು ಹತ್ತಿರದ ನಿರ್ಜನ ಸ್ಥಳಕ್ಕೆ ಚಿಪ್‌್ಸನಿಂದ ಆಮಿಷವೊಡ್ಡಿ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌‍) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವೃತ್ತ ಅಧಿಕಾರಿ ಜಿತೇಂದ್ರ ಸಿಂಗ್‌ ತಿಳಿಸಿದ್ದಾರೆ.

ಆರೋಪಿಗಳಿಬ್ಬರನ್ನೂ ಪೊಲೀಸ್‌‍ ವಶಕ್ಕೆ ತೆಗೆದುಕೊಳ್ಳಲಾಗಿದೆ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ಹೇಳಿದರು.ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

RELATED ARTICLES
spot_img

Latest News