Friday, November 22, 2024
Homeರಾಜ್ಯಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಡೆಹ್ರಾಡೂನ್,ಫೆ.6- ಎಲ್ಲಾ ಜಾತಿ ಹಾಗೂ ಧರ್ಮದವರಿಗೆ ಸಮಾನ ನಾಗರಿಕ ಹಕ್ಕುಗಳನ್ನು ನೀಡುವ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಉತ್ತರಾಖಂಡ ರಾಜ್ಯದ ವಿಧಾನಸಭೆ ಯಲ್ಲಿ ಮಂಡಿಸಲಾಗಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಈ ಮಸೂದೆಯನ್ನು ಸದನದಲ್ಲಿ ಮಂಡಿಸಿದ್ದು, ನಾಳೆ ಅಂಗೀಕರಿಸಬಹುದು. ಈ ಮೂಲಕ ಸ್ವಾತಂತ್ರ್ಯಾನಂತರ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಎಂಬ ಖ್ಯಾತಿಗೆ ಉತ್ತರಾಖಂಡ ಭಾಜನವಾಗಲಿದೆ. ಗೋವಾದಲ್ಲಿ ಮಾತ್ರವೇ ಈ ನಿಯಮ ಜಾರಿಯಲ್ಲಿದೆ. ಆದರೆ ಅದು ಪೋರ್ಚುಗೀಸರ ಕಾಲದಿಂದಲೂ ಇದೆ. ಸ್ವಾತಂತ್ರ್ಯಾನಂತರದ ಗೋವಾ ಸರ್ಕಾರ ಯಾವುದೇ ಹೊಸ ಕಾಯ್ದೆ ರೂಪಿಸಿರಲಿಲ್ಲ.

ಸಿಎಂ ಧಾಮಿ ಸಂವಿಧಾನದ ಮೂಲ ಪ್ರತಿಯೊಂದಿಗೆ ಸದನಕ್ಕೆ ಆಗಮಿಸಿದ್ದರು. ಅದೇ ಸಮಯದಲ್ಲಿ, 10 ರಷ್ಟು ಮೀಸಲಾತಿಗೆ ಸಂಬಂಧಿಸಿದ ಆಯ್ಕೆ ಸಮಿತಿಯ ವರದಿಯನ್ನು ರಾಜ್ಯ ಚಳವಳಿಗಾರರಿಗೆ ಮಂಡಿಸಲಾಯಿತು. ವಿಧಾನಸಭೆಯ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು,ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕ ಕ್ರಮವಾಗಿ ಇಡೀ ರಾಜ್ಯದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇಂದಿನಿಂದ ಕೇಂದ್ರದ ಭಾರತ್ ಬ್ರಾಂಡ್ ಅಕ್ಕಿ ಮಾರುಕಟ್ಟೆಗೆ

ಈ ಮಸೂದೆಗೆ ಪ್ರತಿಪಕ್ಷದ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿ ಸದನದಲ್ಲಿ ಗದ್ದಲ ಎಬ್ಬಿಸಿದರೆ, ಇದಕ್ಕೆ ಪ್ರತಿಯಾಗಿ ಬಜೆಪಿ ಸದಸ್ಯರು ಜೈ ಶ್ರೀರಾಮ, ಭಾರತ್ ಮಾತಾಕಿ ಜೈ ಘೋಷಣೆಗಳನ್ನು ಕೂಗಿದರು. ಬಳಿಕ ವಿಧಾನಸಭೆಯ ಸಭಾಧ್ಯಕ್ಷರು ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಉತ್ತರಾಖಂಡ್ ವಿಧಾನಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿರುವ ಕಾರಣ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ.

ಮತ್ತೊಂದೆಡೆ, ಹಲ್ದ್ವಾನಿಯಲ್ಲಿ ಭಾರೀ ಪೊಲೀಸ್ ಮತ್ತು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಯುಸಿಸಿಗೆ ಸಂಬಂಧಿಸಿದಂತೆ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಭಾರೀ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಬಂಭುಲ್ಪುರ, ಇಂದಿರಾ ನಗರ, ಗಾಂ ನಗರ, ಶನಿ ಬಜಾರ್ನಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಎಸ್ಪಿ ಸಿಟಿ, ಸಿಒ ಅವರೇ ಗಸ್ತು ತಿರುಗುತ್ತಿದ್ದಾರೆ.

ಇನ್ನು ಮುಂದೆ ರಾಜ್ಯದಲ್ಲಿ ಮದುವೆ, ವಿಚ್ಛೇದನ, ಆಸ್ತಿ ಹಕ್ಕು- ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ಧರ್ಮಗಳಿಗೂ ಒಂದೇ ಕಾನೂನು ಅನ್ವಯವಾಗಲಿದೆ. ಈವರೆಗೂ ಆಯಾ ಧರ್ಮಗಳು ಬೇರೆ ಬೇರೆ ವೈಯಕ್ತಿಕ ಕಾನೂನು ಅನುಸರಿಸುತ್ತಿದ್ದವು. ಇದು ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತಿತ್ತು.

ಎಲ್ಲಾ ಧರ್ಮೀಯರಿಗೂ ವಿವಾಹ, ವಿಚ್ಛೇದನ, ಆಸ್ತಿ, ಭೂಮಿ ಮತ್ತು ಉತ್ತರಾಧಿಕಾರ ಕುರಿತು ವಿವಿಧ ಧರ್ಮಗಳಲ್ಲಿ ಪ್ರತ್ಯೇಕ ನಿಯಮಗಳಿವೆ. ಅದನ್ನೆಲ್ಲೆ ರದ್ದುಪಡಿಸಿ ಒಂದೇ ಕಾನೂನು ರೂಪಿಸುವುದೇ ಏಕರೂಪ ನಾಗರಿಕ ಸಂಹಿತೆ.

ಸಿದ್ದರಾಮಯ್ಯ 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ

ಚಿಂತಿಸುವ ಅಗತ್ಯವಿಲ್ಲ :
ಬೆಳಗ್ಗೆಯೇ ವಿಧೇಯಕ ಮಂಡಿಸುವ ಮುನ್ನ ಸಿಎಂ ಧಾಮಿ, ದೇವಭೂಮಿ ಉತ್ತರಾಖಂಡದ ನಾಗರಿಕರಿಗೆ ಸಮಾನ ಹಕ್ಕು ನೀಡುವ ಉದ್ದೇಶದಿಂದ ಇಂದು ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡಿಸಲಾಗುವುದು. ಯುಸಿಸಿ ಜಾರಿಗೆ ಮುಂದಾಗಿರುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವುದು ರಾಜ್ಯದ ಸಮಸ್ತ ಜನತೆಗೆ ಹೆಮ್ಮೆಯ ಕ್ಷಣ. ಜೈ ಹಿಂದ್, ಜೈ ಉತ್ತರಾಖಂಡ ಎಂದಿದ್ದಾರೆ.

ವಾಸ್ತವವಾಗಿ, ಅಧಿವೇಶನದ ಆರಂಭದ ಮೊದಲು, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಯುಸಿಸಿ ಎಲ್ಲಾ ವರ್ಗಗಳಿಗೆ ಒಳಿತಾಗುತ್ತದೆ ಮತ್ತು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ. ಸದನದಲ್ಲಿ ಮಸೂದೆಯನ್ನು ಸಕಾರಾತ್ಮಕ ರೀತಿಯಲ್ಲಿ ಚರ್ಚಿಸುವಂತೆ ಅವರು ಇತರ ರಾಜಕೀಯ ಪಕ್ಷಗಳ ಸದಸ್ಯರನ್ನು ವಿನಂತಿಸಿದರು. ಮಂಗಳವಾರ ಸದನದಲ್ಲಿ ಮಂಡನೆಯಾದ ನಂತರ ಮಸೂದೆಯ ಬಗ್ಗೆ ಚರ್ಚೆ ನಡೆಯಲಿದೆ.

RELATED ARTICLES

Latest News