Homeರಾಜಕೀಯಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರ ಸಮಾವೇಶ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರ ಸಮಾವೇಶ

Executive Committee members' meeting at the Palace Grounds in Bengaluru

ಬೆಂಗಳೂರು, ಜು.7- ಬಿ.ಕೆ.ಹರಿಪ್ರಸಾದ್‌ ಕೆಪಿಸಿಸಿಗೆ ನೂತನ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರ ಸಮಾವೇಶ ನಡೆಸಿದರು.ಬೆಂಗಳೂರಿನ ಅರಮನೆ ಮೈದಾನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ವೀರಪ್ಪ ಮೊಯ್ಲಿ, ರಾಜ್ಯ ಕಾಂಗ್ರೆಸ್‌‍ ಉಸ್ತುವಾರಿ ನಾಯಕ ರಣದೀಪ್‌ ಸಿಂಗ್‌ ಸುರ್ಜೇವಾಲ, ಸಚಿವರಾದ ಸತೀಶ್‌ ಜಾರಕಿಹೊಳಿ, ಕೃಷ್ಣಭೈರೇಗೌಡ, ಮಾಜಿ ಸಚಿವರಾದ ಎಚ್‌.ಕೆ.ಪಾಟೀಲ್‌, ಆರ್‌.ವಿ.ದೇಶಪಾಂಡೆ, ಕೆಪಿಸಿಸಿ ಕಾರ್ಯಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಭೆಯಲ್ಲಿ ಕಾಂಗ್ರೆಸ್‌‍ ನಾಯಕರು, ರಾಜ್ಯದಲ್ಲಿ ನಡೆಯುತ್ತಿರುವ ಎಸ್‌‍ಐಆರ್‌ ಗೊಂದಲಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್‌‍ ಪಕ್ಷ ಎಚ್ಚೆತ್ತುಕೊಂಡು 54 ಸಾವಿರ ಬೂತ್‌ಗಳಿಗೂ ಬಿಎಲ್‌ಎ 2ಗಳನ್ನು ನೇಮಿಸಿದೆ. ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ಬಿಎಲ್‌ಎಗಳ ನೇಮಕಾತಿಯಲ್ಲಿ ನಿರ್ಲಕ್ಷ್ಯತೆ ವಹಿಸಿವೆ. ಹೀಗಾಗಿ ಈಗ ನಡೆದಿರುವ ಎಸ್‌‍ಐಆರ್‌ ಪ್ರಕ್ರಿಯೆಗಳನ್ನು ರದ್ದು ಗೊಳಿಸಬೇಕೆಂದು ಬಿಜೆಪಿ-ಜೆಡಿಎಸ್‌‍ ಆಗ್ರಹಿಸುತ್ತಿವೆ ಎಂದರು.

ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬಿಜೆಪಿಗೆ ಅನುಕೂಲಕರವಾದ ಎಸ್‌‍ಐಆರ್‌ ನಡೆದಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌‍ ಪಕ್ಷ ವ್ಯಾಪಕವಾದ ಜನಜಾಗೃತಿ ಮೂಡಿಸಿದ್ದರಿಂದ ಮತ್ತು ಬಿಎಲ್‌ಎಗಳನ್ನು ನೇಮಿಸಿದ್ದರಿಂದ ಬಿಜೆಪಿಯವರು ಅಂದುಕೊಂಡಂತೆ ಅಲ್ಪಸಂಖ್ಯಾತರ, ದಲಿತರ, ಹಿಂದುಳಿದವರ್ಗ ಹಾಗೂ ಬಡವರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಸಾಧ್ಯವಾಗಿಲ್ಲ.

ಇದರಿಂದ ಹತಾಶರಾಗಿ ಟೀಕೆ ಮಾಡುತ್ತಿದ್ದಾರೆ. ಇಲ್ಲಿ ಅವ್ಯವಹಾರಗಳು ನಡೆದಿವೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ತನೂಲಕ ಕೇಂದ್ರ ಸರ್ಕಾರದ ಅಧಿಕಾರಿಗಳನ್ನೇ ಸಂಪೂರ್ಣವಾಗಿ ಬಳಸಿಕೊಂಡು ಎಸ್‌‍ಐಆರ್‌ ನಡೆಸುವ ಹುನ್ನಾರ ನಡೆದಿದೆ. ಈ ರೀತಿಯ ಸಂಚನ್ನು ಕಾಂಗ್ರೆಸ್‌‍ ಪ್ರಬಲವಾಗಿ ಎದುರಿಸಬೇಕು ಎಂದು ನಾಯಕರು ಕರೆ ನೀಡಿದರು.
ಕೋಮುವಾದಿ ಶಕ್ತಿಗಳು ಅಶಾಂತಿಯ ವಾತಾವರಣ ನಿರ್ಮಿಸಿ ರಾಜಕೀಯ ಲಾಭ ಪಡೆದುಕೊಳ್ಳಲು ಹವಣಿಸುತ್ತಿವೆ. ಈ ವಿಷಯವಾಗಿ ಕಾಂಗ್ರೆಸ್‌‍ ಕಾರ್ಯಕರ್ತರು ಕಟ್ಟೆಚ್ಚರ ವಹಿಸಬೇಕು ಎಂದು ಕರೆ ನೀಡಿದರು.

ಸಿದ್ದರಾಮಯ್ಯ ಅವರು ಕಳೆದ 8 ವರ್ಷದಲ್ಲಿ ಮುಖ್ಯಮಂತ್ರಿಯಾಗಿ ತಾವು ಕೈಗೊಂಡ ಜನಪ್ರಿಯ ಯೋಜನೆಗಳ ಬಗ್ಗೆ ವಿವರಣೆ ನೀಡಿದರು.ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಪಕ್ಷದಲ್ಲಿನ ಒಗ್ಗಟ್ಟು ಪಾಲನೆ ಬಗ್ಗೆ ಹಿತವಚನದ ಮಾತಗಳನ್ನಾಡಿದರು.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಶಾಸಕರು ಕಲಬುರಗಿ ಪ್ರವಾಸದಲ್ಲಿರುವುದರಿಂದ ಸರ್ವ ಸದಸ್ಯರ ಸಮಾವೇಶದಲ್ಲಿ ಅವರ ಗೈರು ಹಾಜರಿ ಎದ್ದು ಕಾಣುತ್ತಿತ್ತು.

RELATED ARTICLES

Latest News