Friday, November 22, 2024
Homeರಾಜ್ಯಮೇಕೆದಾಟು ಯೋಜನೆ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಗೌಡರ ಆಗ್ರಹ

ಮೇಕೆದಾಟು ಯೋಜನೆ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಗೌಡರ ಆಗ್ರಹ

ನವದೆಹಲಿ,ಫೆ.7- ಕೇಂದ್ರ ಸರಕಾರವು 30 ಟಿಎಂಸಿ ಅಡಿ ನೀರು ಸಂಗ್ರಹ ಸಾಮಥ್ರ್ಯದ ಕರ್ನಾಟಕದ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮನವಿ ಮಾಡಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಪ್ರೀಂ ಕೋರ್ಟ್‍ನಲ್ಲಿ ತಮಿಳುನಾಡು ಪರ ವಾದ ಮಂಡಿಸಿದ ಹಿರಿಯ ವಕೀಲರೇ ಮೆಟ್ಟೂರು ಜಲಾಶಯಕ್ಕೆ ಮೇಲ್ಭಾಗದಲ್ಲಿ ಕರ್ನಾಟಕ ಜಲಾಶಯ ನಿರ್ಮಾಣ ಮಾಡಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಧಾನಿಗಳು ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಮಧ್ಯಪ್ರವೇಶ ಮಾಡಬೇಕು. ಕರ್ನಾಟಕದ ಕುಡಿಯುವ ನೀರಿನ ಸಂಕಷ್ಟವನ್ನು ಪರಿಹಾರ ಮಾಡಬೇಕು. ಇದಷ್ಟೇ ಎಲ್ಲರಿಗೂ ನನ್ನ ಪ್ರಾರ್ಥನೆ ಎಂದು ಮಾಜಿ ಪ್ರಧಾನಿಗಳು ಕೈ ಜೋಡಿಸಿ ಮನವಿ ಮಾಡಿಕೊಂಡಿದ್ದಾರೆ.
ಮೇಕೆದಾಟು ಯೋಜನೆಯ ವಿಷಯವನ್ನು ಪ್ರಸ್ತಾಪ ಮಾಡಿದ ಗೌಡರು, ತಮಿಳುನಾಡು ಸ್ನೇಹಿತರು ಅನ್ಯತಾ ಭಾವಿಸಬಾರದು ಎನ್ನುತ್ತಲೇ ರಾಜ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸದಸ್ಯರ ಆಕ್ಷೇಪಣೆ, ಗದ್ದಲದ ನಡುವೆಯೂ ತಮ್ಮ ಮಾತುಗಳನ್ನು ಮುಂದುವರಿಸಿದ ಅವರು; ಜಂತರ್‍ಮಂತರ್‍ನಲ್ಲಿ ಕಾಂಗ್ರೆಸ್‍ನವರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಅವರು ನನ್ನನ್ನೂ ಸೇರಿ ಎಲ್ಲರನ್ನೂ ಬರುವಂತೆ ಕರೆದಿದ್ದಾರೆ. ಈ ದೇಶದ ರಾಜಕೀಯ ಪರಿಸ್ಥಿತಿ ಹೇಗಾಗಿದೆ ಎಂದರೆ, ರಾಜಕೀಯ ಲಾಭಕ್ಕಾಗಿ ಅನಗತ್ಯ ವೆಚ್ಚದ ಅನುತ್ಪಾದಕ ವೆಚ್ಚಗಳನ್ನು ಯಥೇಚ್ಛವಾಗಿ ಮಾಡಲಾಗುತ್ತಿದೆ. ನಾನೆಂದೂ ಇಂಥದ್ದನ್ನು ಮಾಡಿಲ್ಲ ಎಂದರು.

ಕುವೈತ್‍ನಿಂದ ಸಮುದ್ರ ಮೂಲಕ ಬೋಟ್‍ನಲ್ಲಿ ಮುಂಬೈಗೆ ಬಂದ ಮೂವರು ವಶಕ್ಕೆ

ಪ್ರಧಾನಿ ನರೇಂದ್ರಮೋದಿ ಗ್ಯಾರಂಟಿಗಳು ಬಹಳ ವಿಭಿನ್ನವಾಗಿವೆ. ಅವುಗಳ ಬಗ್ಗೆ ನನಗೆ ಗೊತ್ತಿದೆ. ಹಣ ಇಲ್ಲ, ಪ್ರತಿಭಟನೆ ಮಾಡುತ್ತೇವೆ ಎಂದು ನಮ್ಮನ್ನೆಲ್ಲ ಕರೆಯುತ್ತಾರೆ. ಆದರೆ, ಕೇರಳದಲ್ಲಿ ಇದೇ ಉದ್ದೇಶಕ್ಕೆ ಅಲ್ಲಿನ ಎಲ್ ಡಿಎಫ್ ಸರಕಾರ ಕರೆದರೆ ಕಾಂಗ್ರೆಸ್ ನವರು ಬಹಿಷ್ಕಾರ ಹಾಕುತ್ತಾರೆ. ಇದು ರಾಜಕೀಯ ಪರಿಸ್ಥಿತಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಹಾವೇರಿಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಾಹುತಿ ವಿಚಾರವನ್ನು ಪ್ರಸ್ತಾಪಿಸಿದ ಗೌಡರು, ಟಿಕೆಟ್ ಇಲ್ಲದ ಕಾರಣಕ್ಕೆ ತಾಯಿ ಮಗನನ್ನು ಧಾರವಾಡದ ಬಳಿ ರೈಲಿನಿಂದ ಕೆಳಗಿಳಿಸಲಾಗುತ್ತದೆ. ಅಲ್ಲಿ ತಾಯಿ ಮತ್ತು ತನಗೆ ಊಟಕ್ಕಾಗಿ ಆ ಯುವಕ ಅಲೆಯುತ್ತಾನೆ. ಕೆಲಸ ಹುಡುಕುತ್ತಾನೆ. ಸಿಗುವುದಿಲ್ಲ. ಕೊನೆಗೆ ಆ ನತದೃಷ್ಟ ಯುವಕ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಇದು, ಕರ್ನಾಟಕದ ಗ್ಯಾರಂಟಿಗಳ ನೈಜಸ್ಥಿತಿ ಎಂದು ಮಾಜಿ ಪ್ರಧಾನಿಗಳು ತಿಳಿಸಿದ್ದಾರೆ.

ಕಾಡುಗೊಲ್ಲ ಸಮುದಾಯದ ಬಗ್ಗೆ ಪ್ರಸ್ತಾಪ:
ಅನೇಕ ಮೀಸಲಾತಿ ವರದಿಗಳ ಬಗ್ಗೆ ನನಗೆ ಗೊತ್ತಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂತರಾಜು ಸಮಿತಿ ವರದಿ ಬಗ್ಗೆ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯ ಮೀಸಲು ಸೌಲಭ್ಯದಿಂದ ವಂಚಿತರಾಗಿದ್ದಾರೆ. 2014ರಿಂದಲೂ ಇವರನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸಬೇಕೆಂದು ಮನವಿ ಮಾಡಿದರು.

RELATED ARTICLES

Latest News