Homeರಾಷ್ಟ್ರೀಯಕೇರಳಂನಲ್ಲಿ ಭಯಾನಕ ಭೂಕುಸಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೇರಳಂನಲ್ಲಿ ಭಯಾನಕ ಭೂಕುಸಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Landslide hits Wayanad tunnel project site in Kerala

ವಯನಾಡು : ದೇವರ ನಾಡು ಕೇರಳದಲ್ಲಿ ಸೋಮವಾರ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ನಂತರ ವಯನಾಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಅನಕ್ಕೊಂಪೊಯಿಲ್-ಮೆಪ್ಪಾಡಿ ಸುರಂಗ ರಸ್ತೆ ಯೋಜನೆಯ ಸ್ಥಳದ ಸಮೀಪವಿರುವ ಕಲ್ಲಡಿಯ ಮೀನಾಕ್ಷಿ ಸೇತುವೆಯ ಬಳಿ ಭೂಕುಸಿತ ಸಂಭವಿಸಿದೆ. ಘಟನೆ ನಡೆದಾಗ ನಿರ್ಮಾಣ ಕಾರ್ಮಿಕರು ಆ ಪ್ರದೇಶದಲ್ಲಿದ್ದರು.ರಕ್ಷಣಾ ಕಾರ್ಯಾಚರಣೆಗಳನ್ನು ತಕ್ಷಣವೇ ಪ್ರಾರಂಭಿಸಲಾಗಿದ್ದು, ತುರ್ತು ತಂಡಗಳು ಸ್ಥಳಕ್ಕೆ ತಲುಪುವ ಮೊದಲೇ ಸ್ಥಳೀಯ ನಿವಾಸಿಗಳು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಅವಶೇಷಗಳಡಿಯಿಂದ ಇಬ್ಬರನ್ನು ರಕ್ಷಿಸಲಾಗಿದ್ದು, ಇತರ ಐದು ಜನರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ಜನರು ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಶೋಧ ತಂಡಗಳು ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿಸಿವೆ.ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‍ಡಿಆರ್‍ಎಫ್) ತಂಡಗಳು ಶೀಘ್ರದಲ್ಲೇ ಕಾರ್ಯಾಚರಣೆಗೆ ಕೈ ಜೋಡಸಲಿವೆ.

ಕಳೆದ 24 ಗಂಟೆಗಳಲ್ಲಿ ಈ ಪ್ರದೇಶದಲ್ಲಿ 265 ಮಿ.ಮೀ ಮಳೆಯಾಗಿದ್ದು, ನಿರಂತರ ಮಳೆಯಿಂದಾಗಿ ಭೂಕುಸಿತ ಸಂಭವಿಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಸುರಂಗ ಯೋಜನೆಯ ಕಾರ್ಮಿಕರನ್ನು ಸಾಗಿಸಲು ಬಳಸಲಾಗಿದ್ದ ಕೆಲವು ವಾಹನಗಳು ಹಾನಿಗೊಳಗಾಗಿವೆ.ಇಲ್ಲಿಯವರೆಗೆ ಯಾವುದೇ ಸಾವುನೋವುಗಳ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೀಡಿತ ಸ್ಥಳದ ಬಳಿ ಕೆಲವು ಮನೆಗಳು ಮತ್ತು ಹೋಂಸ್ಟೇಗಳಿದ್ದರೂ, ಆರಂಭಿಕ ಅಂದಾಜಿನ ಪ್ರಕಾರ ಮನೆಗಳಿಗೆ ಯಾವುದೇ ಹಾನಿಯಾಗಿಲ್ಲ.
ಕೇರಳದ ಕೃಷಿ ಸಚಿವ ಟಿ ಸಿದ್ದಿಕ್ ಮತ್ತು ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ಪೀಡಿತ ಪ್ರದೇಶದಲ್ಲಿ ಇನ್ನೂ ಯಾರಾದರೂ ಜನರು ಸಿಲುಕಿಕೊಂಡಿದ್ದಾರೆಯೇ ಎಂದು ಪರಿಶೀಲಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ ನಂತರ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಮಂಗಳವಾರ ಕೃಷಿ ಸಚಿವ ಟಿ. ಸಿದ್ದಿಕ್ ಅವರೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಸಭೆಯ ನಂತರ, ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಕಂದಾಯ ಸಚಿವ ಎ.ಪಿ. ಅನಿಲ್ ಕುಮಾರ್ ಮತ್ತು ವಯನಾಡನ್ನು ಪ್ರತಿನಿಧಿಸುವ ಕೃಷಿ ಸಚಿವ ಸಿದ್ದಿಕ್ ಅವರಿಗೆ ತಕ್ಷಣವೇ ಜಿಲ್ಲೆಗೆ ತೆರಳಿ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆ ನಡೆಸುವಂತೆ ಅವರು ಸೂಚನೆ ನೀಡಿದರು

RELATED ARTICLES
spot_img

Latest News