ಬೆಂಗಳೂರು,ಫೆ.7- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕ ಸ್ಥಾನಗಳಿಗೆ ನಡೆಯುವ ದ್ವೆವಾರ್ಷಿಕ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದೆ.ಏಪ್ರಿಲ್ 2 ರಂದು ರಾಜ್ಯಸಭಾ ಸ್ಥಾನದಿಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ಸಯ್ಯದ್ ನಾಸಿರ್ ಹುಸೇನ್‍ರವರು ನಿವೃತ್ತಿಯಾಗಲಿದ್ದಾರೆ.
ರಾಜೀವ್ ಚಂದ್ರಶೇಖರ್ ಬಿಜೆಪಿಯಿಂದ ಚುನಾಯಿತರಾಗಿದ್ದರು. ಉಳಿದ ಮೂವರು ಕಾಂಗ್ರೆಸ್‍ನಿಂದ ಸ್ರ್ಪಸಿ ಚುನಾಯಿತರಾಗಿದ್ದರು. ಇವರ ನಿವೃತ್ತಿಯಿಂದ ತೆರವಾಗುವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.ಏಪ್ರಿಲ್‍ನಲ್ಲಿ ನಿವೃತ್ತಿಯಿಂದ ತೆರವಾಗಲಿರುವ ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ವಿವಿಧ ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಭಾರತದ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಜನವರಿ 29 ರಂದು ಪ್ರಕಟಿಸಿತ್ತು.
ಪ್ರಕಟಿತ ವೇಳಾಪಟ್ಟಿಯಂತೆ ನಾಳೆ ಚುನಾವಣಾ ಅಸೂಚನೆ ಪ್ರಕಟಗೊಳ್ಳಲಿದ್ದು, ನಾಳೆಯಿಂದಲೇ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಬಹುದಾಗಿದೆ. ಫೆ.15 ನಾಮಪತ್ರಗಳ ಸಲ್ಲಿಕೆಗೆ ಕಡೆದಿನವಾಗಿದ್ದು, ಫೆ.16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ರಾಜ್ಯಕ್ಕಾಗುತ್ತಿರುವ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಫೆ.20 ರವರೆಗೂ ಉಮೇದುವಾರಿಕೆ ವಾಪಸ್ ಪಡೆಯಲು ಕಾಲಾವಕಾಶವಿದೆ. ನಾಲ್ಕಕ್ಕಿಂತ ಹೆಚ್ಚು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರೆ ಫೆ.27 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.ಅಂದು ಸಂಜೆ 5 ಗಂಟೆ ನಂತರ ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.