Homeರಾಜ್ಯಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳ ನೇಮಕ

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳ ನೇಮಕ

ಬೆಂಗಳೂರು, ಜು.9-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಚಿವಾಲಯಕ್ಕೆ ಮೂವರು ಪತ್ರಕರ್ತರನ್ನು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ-1 ಆಗಿ ಹಿರಿಯ ಪತ್ರಕರ್ತರಾದ ಪಿ.ತ್ಯಾಗರಾಜ್‌, ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ-2 ಆಗಿ ಆರ್‌.ಜಯಪ್ರಕಾಶ್‌ ಹಾಗೂ ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ-3 ಆಗಿ ರಾಘವೇಂದ್ರಭಟ್‌ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.

ಈ ಸಂಬಂಧ ನಿನ್ನೆ ಅಧಿಕೃತ ಆದೇಶ ಹೊರಡಿಸಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ. ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳ ನಂತರ ಈ ಆದೇಶ ಹೊರಡಿಸಲಾಗಿದೆ.

RELATED ARTICLES

Latest News