Homeರಾಜಕೀಯಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ : ಗರಿಗೆದ ರಾಜಕೀಯ

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ : ಗರಿಗೆದ ರಾಜಕೀಯ

Local body elections in October or November

ಬೆಂಗಳೂರು,ಜು.13- ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಮುಂದೂಡಿಕೆಯಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆ ಅಕ್ಟೋಬರ್‌ ಇಲ್ಲವೇ ನವಂಬರ್‌ ತಿಂಗಳಲ್ಲಿ ನಡೆಸುವುದಾಗಿ ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ ಎಲ್ಲ ರಾಜಕೀಯ ಪಕ್ಷಗಳಲ್ಲೂ ಚಟುವಟಿಕೆಗಳು ಗರಿಗೆದರಿವೆ.

ಅಕ್ಟೋಬರ್‌ ಅಥವಾ ನವೆಂಬರ್‌ ತಿಂಗಳಲ್ಲಿ ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ್‌ ಖಂಡ್ರೆ ಸುಳಿವು ಕೊಟ್ಟಿದ್ದಾರೆ.

ಈ ಘೋಷಣೆಯೊಂದಿಗೆ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರಾಜಕೀಯ ಪಕ್ಷಗಳ ಪಾಲಿಗೆ ಇದು ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ. ಈ ಚುನಾವಣೆ ಕೇವಲ ಸ್ಥಳೀಯ ಆಡಳಿತದ ಬದಲಾವಣೆ ಮಾತ್ರವಲ್ಲ, ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿಯೂ ಹೌದು.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌‍ಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಗ್ಯಾರಂಟಿ ಯೋಜನೆಗಳು ತಳಮಟ್ಟದ ಜನರನ್ನು ತಲುಪಿವೆಯೇ ಎಂಬುದನ್ನು ಪರೀಕ್ಷಿಸಲು ಇದು ಸುವರ್ಣಾವಕಾಶ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮತ್ತು ಜೆಡಿಎಸ್‌‍, ಪಂಚಾಯತ್‌ ಚುನಾವಣೆಗಳಲ್ಲೂ ಅದೇ ಒಗ್ಗಟ್ಟನ್ನು ಪ್ರದರ್ಶಿಸಲು ಸಿದ್ಧತೆ ನಡೆಸಿವೆ. ಸರ್ಕಾರದ ವೈಫಲ್ಯಗಳನ್ನು ಗ್ರಾಮೀಣ ಮಟ್ಟದಲ್ಲಿ ಬಿಂಬಿಸುವ ಮೂಲಕ ತಮ ಅಸ್ತಿತ್ವವನ್ನು ಗಟ್ಟಿಗೊಳಿಸಲು ಈ ಮೈತ್ರಿಕೂಟ ಪ್ರಯತ್ನಿಸುತ್ತಿದೆ.

ಚುನಾವಣೆಯ ಸಿದ್ಧತೆ: ಕ್ಷೇತ್ರಗಳ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಇವು ಪೂರ್ಣಗೊಂಡ ತಕ್ಷಣ ರಾಜ್ಯ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ.

ಆಯೋಗದ ಆದ್ಯತೆ:
ಚುನಾವಣೆಗಳನ್ನು ಸುಗಮವಾಗಿ ಮತ್ತು ನ್ಯಾಯಸಮತವಾಗಿ ನಡೆಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಆಡಳಿತಾತಕ ಸಿದ್ಧತೆಗಳು ವೇಗ ಪಡೆದುಕೊಂಡಿವೆ.ಮುಂಬರುವ ದಿನಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಅಧಿಕೃತ ದಿನಾಂಕಗಳನ್ನು ಘೋಷಿಸುವ ನಿರೀಕ್ಷೆಯಿದೆ.

ಕ್ಷೇತ್ರಗಳ ಮರುವಿಂಗಡಣೆ ಮತ್ತು ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಗಳು ಬಹುತೇಕ ಅಂತಿಮ ಹಂತದಲ್ಲಿವೆ. ಈ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ರಾಜ್ಯ ಚುನಾವಣಾ ಆಯೋಗಕ್ಕೆ ವರದಿಯನ್ನು ಸಲ್ಲಿಸಲಾಗುತ್ತದೆ.

ಆಡಳಿತದ ಸ್ಪಷ್ಟನೆ:
ರಾಜ್ಯ ಸರ್ಕಾರವು ಎಲ್ಲಾ ಹಂತದ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಆಸಕ್ತಿ ಹೊಂದಿದ್ದು, ಈ ಕುರಿತಾದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ವಿಳಂಬಕ್ಕೆ ಕಾರಣ
ಕಳೆದ ಕೆಲವು ವರ್ಷಗಳಿಂದ ಕೋವಿಡ್‌ ಸಾಂಕ್ರಾಮಿಕ, ಕ್ಷೇತ್ರಗಳ ಮರುವಿಂಗಡಣೆ, ಆಡಳಿತಾತಕ ಬದಲಾವಣೆಗಳು ಮತ್ತು ಕೆಲವು ಗ್ರಾಮ ಪಂಚಾಯಿತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೆ ಏರಿಸಿದ ಕಾರಣದಿಂದ ಚುನಾವಣೆ ವಿಳಂಬವಾಗಿತ್ತು.
ಸ್ಥಳೀಯ ಸಂಸ್ಥೆಗಳು ೞಪ್ರಜಾಪ್ರಭುತ್ವದ ಭದ್ರ ಬುನಾದಿ.

ದೀರ್ಘಕಾಲದ ಚುನಾವಣೆಗಳಿಲ್ಲದ ಅವಧಿ ಗ್ರಾಮೀಣ ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಈಗ ನಡೆಯಲಿರುವ ಚುನಾವಣೆಗಳು ರಾಜಕೀಯ ಪಕ್ಷಗಳಿಗೆ ತಮ ಬಲವನ್ನು ಅಳೆಯುವ ವೇದಿಕೆಯಾಗಿದೆ. ಗ್ರಾಮೀಣ ಮತದಾರರು ಸರ್ಕಾರದ ಕಾರ್ಯವೈಖರಿ ಮತ್ತು ಸ್ಥಳೀಯ ನಾಯಕರ ವರ್ಚಸ್ಸಿನ ಆಧಾರದ ಮೇಲೆ ಮತ ಚಲಾಯಿಸಲಿದ್ದು, ಈ ಫಲಿತಾಂಶವು ರಾಜ್ಯ ರಾಜಕಾರಣದ ಮುಂದಿನ ದಿಕ್ಕನ್ನು ನಿರ್ಧರಿಸಲಿದೆ.

ಚುನಾವಣೆ ನಡೆಸುವುದರಿಂದ ಪ್ರಜಾಪ್ರಭುತ್ವದ ಬಲವರ್ಧನೆ ಜನಪ್ರತಿನಿಧಿಗಳ ಆಯ್ಕೆಯ ಮೂಲಕ ಅಧಿಕಾರ ವಿಕೇಂದ್ರೀಕರಣವಾಗುತ್ತದೆ. ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಜನಪ್ರತಿನಿಧಿಗಳು ನೇರವಾಗಿ ಉತ್ತರದಾಯಿಗಳಾಗುತ್ತಾರೆ.
ತಳಮಟ್ಟದ ಕಾರ್ಯಕರ್ತರಿಗೆ ರಾಜಕೀಯದಲ್ಲಿ ಗುರುತಿಸಿಕೊಳ್ಳಲು ಅವಕಾಶ ಸಿಗುತ್ತದೆ. ಅನುದಾನ ಬಳಕೆಚುನಾಯಿತ ಪ್ರತಿನಿಧಿಗಳಿದ್ದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನಗಳು ಸಮರ್ಪಕವಾಗಿ ಬಳಕೆಯಾಗುತ್ತವೆ.

RELATED ARTICLES

Latest News