ಕೊಪ್ಪಳ,ಜು.13-ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ನೇಣಿಗೆ ಶರಣಾದ ಘಟನೆ ಕುಷ್ಟಗಿಯಲ್ಲಿ ನಡೆದಿದೆ. ಶರಣಪ್ಪ ಉಪ್ಪಾರ (49) ಮೃತ ಪೊಲೀಸ್ ಪೇದೆ. ಇವರು ಮುನಿರಾಬಾದ್ ಐಆರ್‌ಬಿಯಲ್ಲಿ ಕೆಲಸ ಮಾಡುತ್ತಿದ್ದರು. ಮದ್ಯ ವ್ಯಸನ ಹೊಂದಿದ ಇವರನ್ನು ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಿಸಲಾಗಿತ್ತು.
ಎರಡು ದಿನಗಳ ಹಿಂದೆ ಅವರು ಗುಣಮುಖರಾಗಿದ್ದಾರೆ ಮನೆಗೆ ಕರೆದುಕೊಂಡು ಹೋಗುವಂತೆ ಮನೆಯವರಿಗೆ ಕರೆ ಮಾಡಲಾಗಿತ್ತು. ಆದರೆ ಪತ್ನಿ ಮನೆಗೆ ಕರೆದುಕೊಂಡು ಹೋಗದೇ ಇದ್ದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ . ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
