Monday, November 25, 2024
Homeರಾಜಕೀಯ | Politicsತಾಕತ್ತಿದ್ದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ನಿಲ್ಲಿಸಿ : ಸಿದ್ದರಾಮಯ್ಯ ಸವಾಲು

ತಾಕತ್ತಿದ್ದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ನಿಲ್ಲಿಸಿ : ಸಿದ್ದರಾಮಯ್ಯ ಸವಾಲು

ಬೆಂಗಳೂರು,ಫೆ.11- ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಘೋಷಣೆ ಮಾಡುವ ಮೂಲಕ ತಮ್ಮ ದಮ್ಮು-ತಾಖತ್ ತೋರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು, ಅದೇ ರೀತಿ ಆಗಾಗ ಗೊಣಗಾಡಿಕೊಂಡರೆ ಏನು ಫಲ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈಷ್ರ್ಯೆಯನ್ನು ಹೊರಹಾಕಿದ್ದಾರೆ. ಇದು ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ. ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂಬುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಾ ಅವರಿಗೆ ನನ್ನ ಸವಾಲು ಎಂದು ಹೇಳಿದ್ದಾರೆ.

ಕರ್ನಾಟಕದ ಬಗ್ಗೆ ಮಾತನಾಡುವಾಗ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿ ನಾಯಕರು ತಮ್ಮ ಆಡಳಿತ ಇರುವ ರಾಜ್ಯಗಳಲ್ಲಿ ಅದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಪ್ರಧಾನಿ ನರೇಂದ್ರಮೋದಿ ಅದೇ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ.

ಇದು ಆ ಪಕ್ಷದ ಬಡಜನ ವಿರೋ ನಿಲುವು ಮತ್ತು ಬೌದ್ದಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರಮೋದಿ, ಅಮಿತ್ ಶಾ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆ. ಬಡಜನರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವುಗಳನ್ನು ವಿರೋಸುತ್ತಲೇ ಬಂದಿರುವ ಇತಿಹಾಸ ಬಿಜೆಪಿ ಮತ್ತು ಸಂಘ ಪರಿವಾರಕ್ಕಿದೆ ಎಂದಿದ್ದಾರೆ.

ದಿವಂಗತ ಪ್ರಧಾನಿ ಇಂದಿರಾ ಗಾಂಯವರು ಗರೀಬಿ ಹಠಾವೋ ಎಂದು ಕರೆ ನೀಡಿದಾಗಲೂ ಇದೇ ಪರಿವಾರದವರು ಅದನ್ನು ವಿರೋಧಿಸಿದ್ದರು. ಭೂ ಸುಧಾರಣೆ, ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಕಾರ್ಯಕ್ರಮಗಳಿದ್ದರೂ ಇವರ ವಿರೋಧ ಇದ್ದೇ ಇದೆ. ಇದಕ್ಕೆ ಬಡವರೇ ತಕ್ಕ ಉತ್ತರವನ್ನು ಕೊಡಬೇಕು ಎಂದು ಹೇಳಿದ್ದಾರೆ.

ಸಂಗೀತ ಸುಧೆಯಲ್ಲಿ ಮಿಂದೆದ್ದ ಒಂದು ಸರಳ ಪ್ರೇಮ ಕಥೆ

ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ನಾನು ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಬಡವರ ಕಲ್ಯಾಣದ ಕಾರ್ಯಕ್ರಮಗಳ ಬಗ್ಗೆಯೂ ಬಿಜೆಪಿ ನಾಯಕರು ಇದೇ ರೀತಿ ತಮ್ಮ ಅಸಹನೆ ಮತ್ತು ಮತ್ಸರ ಕಾರಿದ್ದರು. ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಕೊಡಲು ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಭಾರತ್ ಬ್ರಾಂಡ್‍ನಲ್ಲಿ ಅದೇ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದಾರೆ. ನಾವು ಕಿಲೋಗೆ ರೂ.33ರಂತೆ ಅಕ್ಕಿ ಕೇಳಿದಾಗ ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಕಿಲೋಗೆ ರೂ.29ರಂತೆ ಮಾರಾಟ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ದ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಾ ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕೇಂದ್ರ ಸರ್ಕಾರ ಬರಪರಿಹಾರ ನೀಡಬೇಕೆಂದರೆ ಗೃಹ ಸಚಿವ ಅಮಿತ್ ಶಹಾ ಅಧ್ಯಕ್ಷತೆಯ ಉನ್ನತಾಕಾರ ಸಮಿತಿ ಸಭೆ ನಡೆಸಿ ತೀರ್ಮಾನಿಸಬೇಕು. ಕನ್ನಡಿಗರ ವಿರೋಧಿಯಾಗಿರುವ ಅಮಿತ್ ಶಾ ಅವರು ಆ ಸಭೆಯನ್ನೇ ಕರೆಯುತ್ತಿಲ್ಲ. ಇಂಥವರು ರಾಜ್ಯಕ್ಕೆ ಬಂದು ನಮಗೆ ಪಾಠ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಡವರ ಕಷ್ಟ ಕಡಿಮೆ ಮಾಡುವ ಕಣ್ಣೀರು ಒರೆಸುವ ಕೆಲಸವೇ ನಿಜವಾದ ದೈವಭಕ್ತಿ ಎಂದು ತಿಳಿದುಕೊಂಡವನು ನಾನು. ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿ ಎಷ್ಟು ಬಾರಿ ರಾಮನಾಮ ಹೇಳಿದರೂ ಅದು ವ್ಯರ್ಥ. ಗ್ಯಾರಂಟಿ ಯೋಜನೆಗಳನ್ನು ವಿರೋಸುವವರಿಗೆ ಯಾವ ರಾಮನ ದಯೆಯೂ ಇರಲಾರದು. ತಾಯಿ ಚಾಮುಂಡೇಶ್ವರಿಯ ಆಶೀರ್ವಾದವೂ ಇರಲಾರದು ಹೇಳಿದ್ದಾರೆ.

RELATED ARTICLES

Latest News