Homeರಾಜ್ಯಬಿಡದಿಯಲ್ಲಿ ಸರ್ವೇಗೆ ಬಂದ ಅಧಿಕಾರಿಗಳಿಗೆ 'ಪೊರಕೆ ಸೇವೆ'

ಬಿಡದಿಯಲ್ಲಿ ಸರ್ವೇಗೆ ಬಂದ ಅಧಿಕಾರಿಗಳಿಗೆ ‘ಪೊರಕೆ ಸೇವೆ’

Women farmers beat Bidadi survey team with brooms, demand DC's written order

ಬಿಡದಿ, ಜುಲೈ 13: ಬಿಡದಿ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಜಮೀನು ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ರೈತರು ಹಾಗೂ ಮಹಿಳೆಯರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆದಿದೆ. ಪರಿಸ್ಥಿತಿ ಉದ್ವಿಗ್ನಗೊಂಡ ವೇಳೆ ಕೆಲ ಮಹಿಳೆಯರು ಪೊರಕೆ ಹಿಡಿದು ಪ್ರತಿಭಟನೆ ನಡೆಸಿ, ಅಧಿಕಾರಿಗಳಿಗೆ ಸಂಕೇತಾತ್ಮಕವಾಗಿ ‘ಪೊರಕೆ ಸೇವೆ’ ಮಾಡಿದರು.

ಬಿಡದಿ ಟೌನ್‌ಶಿಪ್‌ಗೆ ಸಂಬಂಧಿಸಿದ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಜಮೀನು ಸರ್ವೇಗಾಗಿ ಮಧ್ಯಾಹ್ನ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ರೈತರು ಹಾಗೂ ಮಹಿಳೆಯರು ಅವರನ್ನು ಸುತ್ತುವರಿದು (ಗೇರಾವ್) ತೀವ್ರ ತರಾಟೆಗೆ ತೆಗೆದುಕೊಂಡರು.

ಘಟನಾ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಪ್ರತಿಭಟನಾಕಾರರು ಅಧಿಕಾರಿಗಳು ಸ್ಥಳವನ್ನು ತಕ್ಷಣ ತೊರೆಯಬೇಕು ಎಂದು ಒತ್ತಾಯಿಸಿದರು. ಕೆಲ ಮಹಿಳೆಯರು ಪರಕೆ ಹಿಡಿದು ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.”ನಮ್ಮನ್ನು ಬೇಕಾದರೆ ಬಂಧಿಸಿ, ಸಾಯಿಸಿ. ಆದರೆ ಬಿಡದಿ ಟೌನ್‌ಶಿಪ್ ಯೋಜನೆಗೆ ನಾವು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ” ಎಂದು ರೈತರು ತಮ್ಮ ಆಕ್ರೋಶವನ್ನು ಹೊರಹಾಕಿದರು.

ಘಟನೆಯ ವೇಳೆ ಕೆಲ ತರಕಾರಿ ಸಾಗಣೆ ವಾಹನಗಳು ಜಕ್ಕಂಗೊಂಡಿರುವ ಮಾಹಿತಿ ಲಭ್ಯವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಜಿಲ್ಲಾ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಪ್ರಸ್ತುತ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Latest News