Homeರಾಜ್ಯಸಿಎಂ ಪ್ರಧಾನ ಸಲಹೆಗಾರರಾಗಿ ಜಿ.ಸಿ.ಚಂದ್ರಶೇಖರ್‌ ನೇಮಕ

ಸಿಎಂ ಪ್ರಧಾನ ಸಲಹೆಗಾರರಾಗಿ ಜಿ.ಸಿ.ಚಂದ್ರಶೇಖರ್‌ ನೇಮಕ

GC Chandrashekhar appointed as Principal Advisor to CM

ಬೆಂಗಳೂರು, ಜು.14-ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್‌ ಅವರನ್ನು ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಯವರಿಗೆ ರಾಜಕೀಯ ವ್ಯವಹಾರಗಳು ಹಾಗೂ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಸಹಾಯ ಮಾಡಲು ಚಂದ್ರಶೇಖರ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.

ಯಾವುದೇ ರೀತಿಯ ಸಂಭಾವನೆ, ಭತ್ಯೆ, ಗೌರವಧನ ಅಥವಾ ಇತರ ಯಾವುದೇ ಸೌಲಭ್ಯಗಳಿಗೆ ಅರ್ಹತೆ ಇಲ್ಲದ ಗೌರವಾಧರಿತ ಆಧಾರದ ಮೇಲೆ ಮುಖ್ಯಮಂತ್ರಿಯವರಿಗೆ ಚಂದ್ರಶೇಖರ್‌ ಅವರು ಸಲಹೆಗಾರರಾಗಿರುತ್ತಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

RELATED ARTICLES

Latest News