Homeರಾಜ್ಯಮಹಿಳೆಯರಿಂದ 'ಪೊರಕೆ ಸೇವೆ' ಬೆನ್ನಲ್ಲೇ ಬಿಡದಿ ಟೌನ್‌ ಶಿಪ್‌ ಸರ್ವೆ ಕಾರ್ಯ ಸ್ಥಗಿತ

ಮಹಿಳೆಯರಿಂದ ‘ಪೊರಕೆ ಸೇವೆ’ ಬೆನ್ನಲ್ಲೇ ಬಿಡದಿ ಟೌನ್‌ ಶಿಪ್‌ ಸರ್ವೆ ಕಾರ್ಯ ಸ್ಥಗಿತ

Bidadi Township Survey Work Suspended

ಬೆಂಗಳೂರು, ಜು.14- ಬಿಡದಿ ಟೌನ್‌ಶಿಪ್‌ ಯೋಜನೆಯ ವ್ಯಾಪ್ತಿಗೆ ಬರುವ ಹಲವು ಗ್ರಾಮಗಳಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಬಿಗಿಯಾದ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ. ಹಿರಿಯ ಪೊಲೀಸ್‌‍ ಅಧಿಕಾರಿ ಗಳು ಮಂಡಲಹಳ್ಳಿ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮಂಡಲಹಳ್ಳಿಯಲ್ಲಿ ನಿನ್ನೆ ಉಂಟಾದ ಅಹಿಕರ ಘಟನೆಗಳ ಹಿನ್ನೆಲೆಯಲ್ಲಿ ಸರ್ವೆ ಕಾರ್ಯವನ್ನು ಅಧಿಕಾರಿಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.

ನಿನ್ನೆ ಮಂಡಲಹಳ್ಳಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್‌‍ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಕೆಲವು ರೈತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ರೈತರಿಗಾಗಿ ರಾಮನಗರ ಜಿಲ್ಲಾ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಅಧಿಕಾರಿಗಳು ಮತ್ತೆ ಸರ್ವೆಯನ್ನು ಮಾಡಲು ಮುಂದಾದರೆ, ಅದನ್ನು ತಡೆದು ತೀವ್ರ ಪ್ರತಿಭಟನೆ ನಡೆಸಲು ರೈತರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿದೆ.

ಟೌನ್‌ಶಿಪ್‌ ಯೋಜನೆಗಾಗಿ ಸರ್ವೆ ನಡೆಸಲು ತೆರಳಿದ್ದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆಯಿಂದ ಹೊಡೆದು, ಕಲ್ಲು ತೂರಾಟದಿಂದ ಕಾರುಗಳನ್ನು ಜಖಂಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಉದ್ವಿಗ್ನ ವಾತಾವರಣ ಉಂಟಾಗಿತ್ತು.

ಅಧಿಕಾರಿಗಳು ಏಕಾಏಕಿ ಸರ್ವೇ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಘಟನೆಯ ಹಿನ್ನೆಲೆಯಲ್ಲಿ ಮಂಡಲಹಳ್ಳಿ ಗ್ರಾಮದ ಸುತ್ತಮುತ್ತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

RELATED ARTICLES

Latest News