ಬೆಂಗಳೂರು, ಫೆ.13- ತುಂಗಾನದಿಯಿಂದ ಭದ್ರಾ ಜಲಾಶಯಕ್ಕೆ 17 ಟಿಎಂಸಿ ನೀಡು ಹರಿಸುವ ಮಹತ್ವದ ಯೋಜನೆಗೆ ಭೂ ಸ್ವಾಧೀನಪಡಿಸಿಕೊಳ್ಳಲು ಮುಂದಿನ ಬಜೆಟ್‍ನಲ್ಲಿ 500 ಕೋಟಿ ರೂ. ಮೀಸಲಿರಿಸುವಂತೆ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಒತ್ತಾಯಿಸಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರ ಜೆಡಿಎಸ್ ಶಾಸಕ ಸಿ.ಬಿ.ಸುರೇಶ್ ಬಾಬು ಪ್ರಶ್ನೆ ಕೇಳಿ, ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳು ನೆನಗುದಿಗೆ ಬಿದ್ದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎನ್‍ಸಿಪಿ ಹೆಸರು, ಚಿಹ್ನೆಗಾಗಿ ಸುಪ್ರೀಂ ಮೊರೆ ಹೋದ ಶರದ್‍ಪವಾರ್
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ 856 ಕೋಟಿ ರೂ.ಗಳ ಮಂಜೂರಾತಿ ನೀಡಲಾಗಿದೆ. ಕೆಲವು ಕಡೆ ರೈತರು ವಿರೋಧ ಪಡಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇವೆ. ಭೂಸ್ವಾೀಧಿನ ವಿಳಂಬವಾಗುತ್ತಿದೆ. ಭದ್ರಾ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದಂತೆ 5300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ ಎಂದು ಆಕ್ಷೇಪಿಸಿದರು. ಹಿರಿಯರಾದ ಟಿ.ಬಿ.ಜಯಚಂದ್ರ ಅವರು ತಮ್ಮ ಕ್ಷೇತ್ರಕ್ಕೆ ನೀರು ತೆಗೆದುಕೊಂಡು ಹೋಗಲು ಶ್ರಮಿಸಿದ್ದಾರೆ. ಅವರ ಬೇಡಿಕೆಯಂತೆ ಭೂ ಸ್ವಾೀಧಿನಕ್ಕೆ ವಿಶೇಷ ಹಣ ನೀಡಲು ಪರಿಶೀಲಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.