ವಿಶ್ವಸಂಸ್ಥೆ, ಫೆ. 13- ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕಳವಳ ವ್ಯಕ್ತಪಡಿಸಿದ್ದಾರೆ. ದೇಶದ ಪರಿಸ್ಥಿತಿಯನ್ನು ಬಹಳ ಹತ್ತಿರದಿಂದ ನೋಡಿದ್ದೇನೆ ತ್ರೀವ್ರ ಹಿಂಸಾಚಾರದಿಂದ ಅಭಿವೃದ್ದಿ ಹಳಿ ತಪ್ಪುತ್ತಿದೆ ಕೂಡಲೆ ಸರಿ ದಾರಿಗೆ ಬರುವಂತೆ ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರನ್ನು ಒತ್ತಾಯಿಸಿದ್ದಾರೆ.
ಪಾಕಿಸ್ತಾನದ ಚುನಾವಣೆಯ ಪರಿಸ್ಥಿತಿಯನ್ನು ನೋಡಿದರೆ ನಿಜವಾಗಿಯೂ ಬಹಳ ಕಟ್ಟದ್ದಾಗಿತ್ತು. ಸ್ಥಾಪಿತ ಕಾನೂನು ಚೌಕಟ್ಟಿನಲ್ಲಿ ಎಲ್ಲಾ ಸಮಸ್ಯೆಗಳು ಮತ್ತು ವಿವಾದಗಳನ್ನು ಪರಿಹರಿಸಬಹುದು ,ಪಾಕಿಸ್ತಾನದ ಜನರ ಹಿತಾಸಕ್ತಿಯಲ್ಲಿ ಮಾನವ ಹಕ್ಕುಗಳು ಮತ್ತು ಕಾನೂನಿನ ನಿಯಮವನ್ನು ಸಂಪೂರ್ಣವಾಗಿ ಗೌರವಿಸಲು ಗುಟೆರೆಸ್ ಕರೆ ನೀಡುತ್ತಾರೆ.
ಎನ್‍ಸಿಪಿ ಹೆಸರು, ಚಿಹ್ನೆಗಾಗಿ ಸುಪ್ರೀಂ ಮೊರೆ ಹೋದ ಶರದ್‍ಪವಾರ್
ಶಾಂತಿ ಕಾಪಾಡಿ ,ದೇಶದದ ಅಭಿವೃದ್ದಿಯ ಬಗ್ಗೆ ಗಮನವಿರಲಿ ಹಿಂಸಾಚಾರ ಹಾಗು ಉದ್ವಿಘ್ನ ಪರಿಸ್ಥಿತಿ ನಿನಾಯಿಸಲು ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ. ಪ್ರಸ್ತುತ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾ-ï (ಪಿಟಿಐ) ಪಕ್ಷ ಮತ್ತು ಮಾಜಿ ಪ್ರಧಾನಿ ನವಾಜ್ ಷರೀ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಎರಡೂ ಪಕ್ಷಗಳು ಹೆಚ್ಚು ಸ್ಥಾನ ಗಳಿಸಿವೆ, ಆದರೆ ಯಾವುದೇ ಪಕ್ಷಕ್ಕೆ ಬಹುಮತ ಸಿಕ್ಕಿಲ್ಲ ಹಾಗಾಗಿ ಸಮ್ಮಿಶ್ರ ಸರ್ಕಾರ ಅನಿವಾರ್ಯವಾಗಿದೆ.