Monday, November 25, 2024
Homeರಾಜ್ಯಕೇಂದ್ರದಿಂದ ಯಾವುದೇ ಬರ ಪರಿಹಾರ ಸಿಕ್ಕಿಲ್ಲ : ಚೆಲುವರಾಯಸ್ವಾಮಿ ಅಸಮಾಧಾನ

ಕೇಂದ್ರದಿಂದ ಯಾವುದೇ ಬರ ಪರಿಹಾರ ಸಿಕ್ಕಿಲ್ಲ : ಚೆಲುವರಾಯಸ್ವಾಮಿ ಅಸಮಾಧಾನ

ಬೆಂಗಳೂರು,ಫೆ.13- ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪರಿಹಾರ ನಿಧಿಯನ್ನು ಪರಿಷ್ಕರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನ ಪರಿಷತ್‍ನಲ್ಲಿ ಸದಸ್ಯ ಟಿ.ಎ.ಶರವಣ ಪ್ರಶ್ನೆಗೆ ತೋಟಗಾರಿಕೆ ಸಚಿವರ ಪರವಾಗಿ ಉತ್ತರಿಸಿದ ಅವರು,ಯಾವುದೇ ರಾಜ್ಯದಲ್ಲಿ ಪ್ರಕೃತಿ ವಿಕೋಪ ಉಂಟಾದ ವೇಳೆ NDRF ಮಾರ್ಗಸೂಚಿಯಡಿ ಪರಿಹಾರ ನಿಗದಿ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಿನ ಬರಗಾಲ ಕಾಣಿಸಿಕೊಂಡಿರುವ ಕಾರಣ, ಮಾರ್ಗಸೂಚಿ ಪರಿಷ್ಕರಿಸುವಂತೆ ನಾವು ಮನವಿ ಮಾಡಿದ್ದೇವೆಎಂದು ತಿಳಿಸಿದರು.

ಬರಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ ನಾನು ದೆಹಲಿಗೆ ಹೋಗಿ ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರದಿಂದ ನಮಗೆ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಿಂದ ಬರ ನಿರ್ವಹಣೆಗೆ ನಾವು ಕ್ರಮ ಕೈಗೊಂಡಿದ್ದೇವೆ 33 ಲಕ್ಷ ರೈತರಿಗೆ 2000 ರೂ ರೈತರ ಖಾತೆಗೆ ಹಣ ಹಾಕಿದ್ದೇವೆ.ಕೇಂದ್ರ ಸರ್ಕಾರದಿಂದ ಹಣ ಬಂದರೆ ಉಳಿದ ರೈತರಿಗೂ ಹಣ ಹಾಕುತ್ತೇವೆ ಎಂದರು.

ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ಈ ಮಾರ್ಗಸೂಚಿ ಪ್ರಕಾರ ಮಳೆಯಾಶ್ರಿತ ಬೆಳಗಳಿಗೆ 8500 ರೂ, ನೀರಾವರಿ ಬೆಳೆಗೆ 17000 ರೂ,ಹಾಗೂ ಬಹುವಾರ್ಷಿಕ ಬೆಳೆಗೆ25000ರೂ ಪರಿಹಾರ ನೀಡುತ್ತೇವೆ. ಒಂದು ವೇಳೆ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಪರಿಷ್ಕರಣೆ ಮಾಡಿದರೆ,ರೈತರಿಗೆ ಹೆಚ್ಚಿನ ಪರಿಹಾರ ಸಿಗಲಿದೆ ಎಂದು ವಿವರಿಸಿದರು.ಕೃಷಿ, ರೇಷ್ಮೆ, ಮತ್ತು ತೋಟಗಾರಿಕೆ ಬೆಳೆ ಸೇರಿದಂತೆ ಬೆಳೆ ನಷ್ಟವಾಗಿರುವ ರೈತರಿಗೆ 2 ಸಾವರಿದಂತೆ ಇಲ್ಲಿಯವರೆಗೆ ಒಟ್ಟು 30,24,795 ರೈತರಿಗೆ573.28 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರ ಸಮಾರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಂಡಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

RELATED ARTICLES

Latest News