ಮೈಸೂರು, ಜು.17: ಬಿಜೆಪಿ ಹೈಕಮಾಂಡ್ಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಬಗ್ಗೆ ಭಯವಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರ ಕುಟುಂಬವೇ ಬಹಳ ಪ್ರಭಾವಿ ಎಂದು ಬಿಜೆಪಿ ಹೈಕಮಾಂಡ್ನ ನಾಯಕರು ಭಾವಿಸಿದ್ದಾರೆ. ಆದರೆ, ಶೀಘ್ರದಲ್ಲೇ ಅವರಿಗೆ ಸತ್ಯದ ಅರಿವಾಗಲಿದೆ ಎಂದು ಹೇಳಿದರು.
ಕೆಲವು ರಾಜ್ಯಗಳಲ್ಲಿ ನಾಯಕತ್ವ ಬದಲಾವಣೆ ನಡೆದಿರುವುದನ್ನು ಉಲ್ಲೇಖಿಸಿದ ಯತ್ನಾಳ್, ನವೆಂಬರ್ ಅಥವಾ ಡಿಸೆಂಬರ್ ಒಳಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲೂ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿದರು.
ಅಡ್ಡ ಮತದಾನದ ಆರೋಪ
ಬಿಜೆಪಿ ಮತ್ತು ಕಾಂಗ್ರೆಸ್ನ ಕೆಲವರು ಸೇರಿ ಅಡ್ಡ ಮತದಾನ ಮಾಡಿಸಿದ್ದಾರೆ. ಈ ವಿಚಾರ ಬಿಜೆಪಿ ಹೈಕಮಾಂಡ್ಗೆ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ. ಇಂತಹ ಗಂಭೀರ ವಿಷಯದಲ್ಲಿ ಏಕೆ ಮೌನ ವಹಿಸಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಯತ್ನಾಳ್ ಪ್ರಶ್ನಿಸಿದರು. ರಾಜ್ಯ ಬಿಜೆಪಿ ಘಟಕದಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡುತ್ತಿಲ್ಲ. ನಾಯಕರು ಗುಂಪುಗಳಾಗಿ ವಿಭಜನೆಯಾಗಿದ್ದು, ಇದರಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ ಎಂದು ಯತ್ನಾಳ್ ಟೀಕಿಸಿದರು.
