Friday, November 22, 2024
Homeರಾಜ್ಯBIG NEWS : HSRP ಪ್ಲೇಟ್ ಬದಲಾವಣೆಗೆ 3 ತಿಂಗಳು ಅವಧಿ ವಿಸ್ತರಣೆ

BIG NEWS : HSRP ಪ್ಲೇಟ್ ಬದಲಾವಣೆಗೆ 3 ತಿಂಗಳು ಅವಧಿ ವಿಸ್ತರಣೆ

ಬೆಂಗಳೂರು,ಫೆ.14- ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಸಮಯ ಅವಕಾಶವನ್ನು ರಾಜ್ಯದಲ್ಲಿ ಇನ್ನು ಮೂರು ತಿಂಗಳು ವಿಸ್ತರಣೆ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯ ಮಧು.ಜಿ ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದರು.

ಅತಿ ಸುರಕ್ಷತಾ ನೋಂದಣಿ ಫಲಕಗಳ ಯೋಜನೆಯನ್ನು ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಇದರಿಂದಾಗಿ ವಾಹನಗಳನ್ನು ಬಳಸಿಕೊಂಡು ಅಪರಾಧ ಎಸಗುವುದನ್ನು ತಡೆಗಟ್ಟುವುದರ ಜೊತೆಗೆ ರಸ್ತೆಯ ಮೇಲೆ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಶೇ.100ರಷ್ಟು ವಿವಿಪ್ಯಾಟ್ ಬಳಕೆಗೆ ಕಾಂಗ್ರೆಸ್ ಆಗ್ರಹ

ನೋಂದಣಿ ಫಲಕವು ಅಲ್ಯೂಮಿನಿಯಂನಿಂದ ನಿರ್ಮಿತವಾದ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಇದಾಗಿದೆ. ಮರುಬಳಕೆ ಮಾಡಲಾಗದ ಎರಡು ಲಾಕ್‍ಗಳನ್ನು ಬಳಸಿಕೊಂಡು ವಾಹನದ ಮೇಲೆ ಅಳವಡಿಸಲಾಗುತ್ತದೆ. 20 ಎಂ.ಎಂ* 20 ಎಂಎಂ ಗಾತ್ರದ ಚಕ್ರದ ಕ್ರೋಮಿಯಂ ಆಧಾರಿತ ಹೋಲೊಗ್ರಾಮ್‍ನ್ನು ಹಿಂಭಾಗ ಹಾಗೂ ಮುಂಭಾಗ ಎರಡು ಪ್ಲೇಟ್‍ಗಳ ಮೇಲಿನ ಎಡ ಮೂಲೆಯಲ್ಲಿ ಬಿಸಿ ಟ್ಯಾಪಿಂಗ್ ಮೂಲಕ ಅಳವಡಿಸಲಾಗುತ್ತದೆ.

ಇದು ಸಂಪೂರ್ಣವಾಗಿ ಪಾರದರ್ಶಕವಾಗಿದ್ದು, ಇಲಾಖೆಯ ಅಧಿಕೃತ ವೆಬ್‍ಸೈಟ್ ಬಳಸಿಕೊಂಡು ಆನ್‍ಲೈನ್ ಮೂಲಕವೇ ವಾಹನ ಸವಾರರು ನೋಂದಣಿ ಮಾಡಿಕೊಳ್ಳಬಹುದೆಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಯಾವುದೇ ಕಾರಣಕ್ಕೂ ವಾಹನ ಸವಾರರು, ಆರ್‍ಟಿಒ ಕಚೇರಿ ಇಲ್ಲವೇ ಬೇರೊಂದು ಕಡೆ ನಗದು ಕೊಟ್ಟು ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಅಗತ್ಯವಿಲ್ಲ.

‘ದೆಹಲಿ ಚಲೋ’ ಪ್ರತಿಭಟನೆ : ಮತ್ತೆ ರೈತರ ಮೇಲೆ ಆಶ್ರುವಾಯು ಪ್ರಯೋಗ

ಇದು ನಗದು ರಹಿತ ಮತ್ತು ಆನ್‍ಲೈನ್ ಮೂಲಕ ನಡೆಯುವ ಪ್ರಕ್ರಿಯೆ ಆಗಿದೆ. ಒಂದು ವೇಳೆ ಯಾರಾದರೂ ನಕಲಿ ವೆಬ್‍ಸೈಟ್ ಬಳಸಿಕೊಂಡು ನೋಂದಣಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ಕೊಟ್ಟರು.

RELATED ARTICLES

Latest News