ನಿತ್ಯ ನೀತಿ : ಬೇರೆಯವರ ತಪ್ಪುಗಳನ್ನು ನೋಡಿ ನಾವು ನಮ್ಮನ್ನು ತಿದ್ದಿಕೊಳ್ಳಬೇಕು. ಎಲ್ಲ ತಪ್ಪುಗಳನ್ನು ನಾವೇ ಮಾಡಿ ಕಲಿಯುವಷ್ಟು ದೊಡ್ಡ ಜೀವನ ನಮ್ಮ ಬಳಿ ಇಲ್ಲ. ಅದಕ್ಕಾಗಿ ನಾವು ಬೇರೆಯವರ ತಪ್ಪುಗಳಿಂದ ಕಲಿಯಬೇಕು.
ಪಂಚಾಂಗ ಗುರುವಾರ 15-02-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಅಶ್ವಿನಿ / ಯೋಗ: ಶುಕ್ಲ / ಕರಣ: ಗರಜೆ
ಸೂರ್ಯೋದಯ : ಬೆ.06.42
ಸೂರ್ಯಾಸ್ತ : 06.25
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30
ರಾಶಿ ಭವಿಷ್ಯ
ಮೇಷ: ಕೌಟುಂಬಿಕ ಕಲಹಗಳು ಬೀದಿಗೆ ಬರುವ ಸಾಧ್ಯತೆಗಳಿವೆ. ಸಹೋದ್ಯೋಗಿಗಳೇ ಶತ್ರುಗಳಾಗುವರು.
ವೃಷಭ: ಸಮಾಧಾನದಿಂದ ಕಾರ್ಯನಿರ್ವಹಿಸಿದಲ್ಲಿ ಕೆಲಸ-ಕಾರ್ಯಗಳಲ್ಲಿ ಜಯ ಕಟ್ಟಿಟ್ಟ ಬುತ್ತಿ.
ಮಿಥುನ: ಸಾಂಸಾರಿಕ ಜೀವನ ತೃಪ್ತಿಕರವಾಗಿರಲಿದೆ. ನೌಕರರಿಗೆ ಹೊಸ ವಸತಿ ವ್ಯವಸ್ಥೆಯಾಗಲಿದೆ.
ಕಟಕ: ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಸಂತಸದಿಂದ ಕೆಲಕಾಲ ಕಳೆಯುವಿರಿ.
ಸಿಂಹ: ವೈದ್ಯರಿಗೆ ವಿಶೇಷ ರೀತಿಯ ಅನುಭವ ಸಿಗಲಿದೆ. ಮೇಲಧಿಕಾರಿಗಳೊಂದಿಗೆ ಮೆಚ್ಚುಗೆ ಪಡೆಯಲು ಹೆಚ್ಚಿನ ಪ್ರಯತ್ನ ನಡೆಸಿ.
ಕನ್ಯಾ: ಕೆಲಸ-ಕಾರ್ಯ ಗಳು ಮಂದಗತಿಯಲ್ಲಿ ಸಾಗಲಿವೆ. ಉದ್ಯೋಗಿಗಳು ಅಲ್ಪ ಪ್ರಗತಿ ಕಾಣುವರು.
ತುಲಾ: ಲೇವಾದೇವಿ ವ್ಯವಹಾರಗಳು ನಿರಂತರ ವಾಗಿ ಮುಂದುವರೆಯಲಿವೆ. ಸದುದ್ದೇಶದಿಂದ ಕೆಲವು ಕೆಲಸಗಳನ್ನು ಗೌಪ್ಯವಾಗಿ ನಿರ್ವಹಿಸಿ.
ವೃಶ್ಚಿಕ: ಹೊಸ ಕೆಲಸ ಆರಂಭಿಸಲು ಕುಟುಂಬ ದವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಿ.
ಧನುಸ್ಸು: ಉದ್ಯೋಗ ನಿಮಿತ್ತ ಪ್ರಯಾಣ ಮಾಡು ವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ.
ಮಕರ: ನಿಯೋಜಿತ ಕಾರ್ಯಗಳನ್ನು ಸಕಾಲದಲ್ಲಿ ಮುಕ್ತಾಯಗೊಳಿಸಿದ ಸಮಾಧಾನ ಸಿಗಲಿದೆ.
ಕುಂಭ: ದೂರ ಪ್ರಯಾಣದಿಂದ ಮನಸ್ಸಿಗೆ ನೆಮ್ಮದಿ ಸಿಗಬಹುದು. ಮಕ್ಕಳಿಂದ ಸಂತೋಷ ಸಿಗಲಿದೆ.
ಮೀನ: ಹೊಸದಾಗಿ ಪರಿಚಯವಾಗುವ ಉದ್ಯಮಿ ಯೊಂದಿಗೆ ವ್ಯವಹಾರ ಆರಂಭಿಸಲು ಯೋಚಿಸುವಿರಿ.