Friday, November 22, 2024
Homeರಾಜ್ಯವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ ಕಾನೂನು ಸುವ್ಯವಸ್ಥೆ ವಿಚಾರ

ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ ಕಾನೂನು ಸುವ್ಯವಸ್ಥೆ ವಿಚಾರ

ಬೆಂಗಳೂರು, ಫೆ.14- ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪದ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿತು. ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಶ್ನೋತ್ತರವನ್ನು ಕೈಗೆತ್ತಿಕೊಳ್ಳಲು ಮುಂದಾದರು. ಆಗ ಮಧ್ಯ ಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ನಿಲುವಳಿ ಸೂಚನೆ ನೋಟಿಸ್ ನೀಡಿದ್ದು, ಅದರ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು.

ನಿನ್ನೆ ಕೂಡ ಇದೇ ವಿಚಾರದ ಬಗ್ಗೆ ನೋಟಿಸ್ ನೀಡಿದ್ದರೂ ಅವಕಾಶ ಸಿಗಲಿಲ್ಲ. ಹಾಗಾಗಿ ಇಂದು ನೋಟಿಸ್ ನೀಡಲಾಗಿದೆ ಎಂದರು. ಆಗ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಚಾರವನ್ನು ನಿಯಮಾನುಸಾರ ನಿಲುವಳಿ ಸೂಚನೆಯಲ್ಲಿ ಚರ್ಚಿಸಲು ಅವಕಾಶವಿಲ್ಲ ಎಂದು ಆಕ್ಷೇಪಿಸಿದರಲ್ಲದೆ ಬೇರೆ ರೂಪದಲ್ಲಿ ಚರ್ಚಿಸಲು ತಮ್ಮ ತಕರಾರು ಇಲ್ಲ ಎಂದು ಹೇಳಿದರು.

ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ

ಈ ಹಂತದಲ್ಲಿ ಅಶೋಕ್ ಅವರ ಬೆಂಬಲಕ್ಕೆ ನಿಂತ ಬಿಜೆಪಿಯ ಹಿರಿಯ ಸದಸ್ಯರಾದ ಸುರೇಶ್ ಕುಮಾರ್, ಸುನೀಲ್ ಕುಮಾರ್ ಹಾಗೂ ಸಿ.ಸಿ.ಪಾಟೀಲ್ ಅವರು ನಿಲುವಳಿ ಸೂಚನೆಯಡಿ ಹತ್ತಾರು ಬಾರಿ ಕಾನೂನು ಮತ್ತು ಸುವ್ಯವಸ್ಥೆ ವಿಚಾರ ಸದನದಲ್ಲಿ ಚರ್ಚೆಯಾಗಿದೆ. ನಮಗೂ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಎರಡೂ ಕಡೆಯ ಅಭಿಪ್ರಾಯವನ್ನು ಆಲಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ವಿಚಾರ ನಿಲುವಳಿ ಸೂಚನೆಯಡಿ ಬರುವುದಿಲ್ಲ ಎಂದು ಸಭಾಧ್ಯಕ್ಷರು ಪ್ರಕಟಿಸಿದರು.

ಈ ವಿಚಾರವನ್ನು ನಿಯಮ 69ರಡಿ ಚರ್ಚೆಗೆ ಅನುವು ಮಾಡಿಕೊಡಲಾಗುವುದು. ವಿರೋಧ ಪಕ್ಷದ ನಾಯಕರು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ಸಂದರ್ಭದಲ್ಲಿ ಮಾತನಾಡಬಹುದು. ಸಮಯ ಅಭಾವವಿರುವುದರಿಂದ ಸಹಕರಿಸಬೇಕು ಎಂದು ಹೇಳಿದರು.

ಇಂದಿನಿಂದ ಆರಂಭವಾಗಬೇಕಿದ್ದ 2ನೇ ಹಂತದ ಭಾರತ್ ಜೋಡೋ ನ್ಯಾಯ ಯಾತ್ರೆ ರದ್ದು

ಅದಕ್ಕೆ ಸಮ್ಮತಿಸಿದ ಅಶೋಕ್ ಅವರು ಕಾನೂನು ಮತ್ತು ಸುವ್ಯವಸ್ಥೆ ವಿಚಾರದ ಬಗ್ಗೆ ಗೃಹ ಸಚಿವರು ಪ್ರತ್ಯೇಕ ಉತ್ತರ ನೀಡಬೇಕು ಎಂದಾಗ ಪರಮೇಶ್ವರ್ ಅವರು ಸಮ್ಮತಿ ಸೂಚಿಸಿದರು.

RELATED ARTICLES

Latest News