Homeರಾಜ್ಯದೇವೇಗೌಡರ ಧರ್ಮಪತ್ನಿ ಚೆನ್ನಮ್ಮನವರ ಆರೋಗ್ಯ ಸ್ಥಿರ : ICUನಲ್ಲಿ ಚಿಕಿತ್ಸೆ

ದೇವೇಗೌಡರ ಧರ್ಮಪತ್ನಿ ಚೆನ್ನಮ್ಮನವರ ಆರೋಗ್ಯ ಸ್ಥಿರ : ICUನಲ್ಲಿ ಚಿಕಿತ್ಸೆ

Deve Gowda's wife Chennamma's health stable: Treatment in ICU

ಬೆಂಗಳೂರು,ಜು.18- ವಯೋ ಸಹಜ ಅನಾರೋಗ್ಯ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬುಧವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೆನ್ನಮ ಅವರನ್ನು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೆನ್ನಮ ಅವರು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದು, ಚೇತರಿಕೆಯಾಗುವ ವಿಶ್ವಾಸವನ್ನು ಅವರ ಕುಟುಂಬದವರು ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸೇರಿದಂತೆ ಅವರ ಕುಟುಂಬದವರು ಆಸ್ಪತ್ರೆಗೆ ಭೇಟಿ ನೀಡಿ ಚೆನ್ನಮ ಅವರ ಆರೋಗ್ಯ ವಿಚಾರಿಸಿದರು. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಭಾವುಕರಾಗಿದ್ದರು.

ದೇವೇಗೌಡರು ಮಾತನಾಡಿ, ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದಾರೆ. ಉಸಿರಾಟದ ಸಮಸ್ಯೆ ಬಿಟ್ಟರೆ ಬೇರೇನೂ ಇಲ್ಲ. ದೇವರಿದ್ದಾನೆ ನೋಡೋಣ ಎಂದು ಹೇಳಿದರು.

ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿ, ಬುಧವಾರ ಆರೋಗ್ಯ ಸಮಸ್ಯೆಯಿಂದಾಗಿ ನಮ ತಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ದೇವರನ್ನು ನಂಬಿ ಬದುಕುತ್ತಿದ್ದಾರೆ. ದೇವರೇ ಅವರಿಗೆ ಶಕ್ತಿ ಕೊಡಬೇಕು. 25 ವರ್ಷಗಳ ಹಿಂದೆ ನಮ ತಾಯಿಯವರ ಮೇಲೆ ಆಸಿಡ್‌ ದಾಳಿ ಆಗಿತ್ತು. ಆಗ ಬದುಕುವುದೇ ಕಷ್ಟ ಎಂಬ ಪರಿಸ್ಥಿತಿ ಇತ್ತು. ಅವರು ನಿತ್ಯ ಮಾಡುವ ದೇವರ ಪೂಜಾಫಲದ ಆರೋಗ್ಯದಲ್ಲಿ ಸುಧಾರಣೆ ಆಗಿತ್ತು ಎಂದರು. ನಮ ತಾಯಿ ನಂಬಿರುವ ರಾಜರಾಜೇಶ್ವರಿ ದೇವಿ ಕಾಪಾಡುತ್ತಾಳೆ ಎಂಬ ನಂಬಿಕೆ ಇದೆ. ಗುಣಮುಖರಾಗಿ ಮನೆಗೆ ಮರಳುತ್ತಾರೆ ಎಂಬ ವಿಶ್ವಾಸವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದರು.

RELATED ARTICLES

Latest News