Homeರಾಜ್ಯಎಸ್‌‍ಐಆರ್‌ ಪ್ರಕ್ರಿಯೆಯಿಂದ ಶಿಕ್ಷಕರನ್ನು ಕೈಬಿಡುವಂತೆ ಮೋದಿಗೆ ಪತ್ರ ಬರೆದ ವಿದ್ಯಾರ್ಥಿ

ಎಸ್‌‍ಐಆರ್‌ ಪ್ರಕ್ರಿಯೆಯಿಂದ ಶಿಕ್ಷಕರನ್ನು ಕೈಬಿಡುವಂತೆ ಮೋದಿಗೆ ಪತ್ರ ಬರೆದ ವಿದ್ಯಾರ್ಥಿ

Student writes to Modi asking him to drop teachers from SIR process

ಬೆಂಗಳೂರು, ಜು.18- ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌‍ಐಆರ್‌) ಪ್ರಕ್ರಿಯೆಯ ಅವಧಿ ವಿಸ್ತರಣೆಗೊಂಡಿರುವುದರಿಂದ ಶಾಲಾ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ ಎಂದು ಆರೋಪಿಸಿ, ಗೋಕುಲ್‌ ಎನ್ನುವ ವಿದ್ಯಾರ್ಥಿಯೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಶಿಕ್ಷಕರನ್ನು ತಕ್ಷಣ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿ ಕೊಂಡಿದ್ದಾರೆ.

2026-27ರ ಶೈಕ್ಷಣಿಕ ವರ್ಷ ಇದೀಗ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಅನೇಕ ಸರ್ಕಾರಿ ಶಾಲೆಗಳ ಶಿಕ್ಷಕರನ್ನು ಕಾರ್ಯಕ್ಕೆ ನಿಯೋಜಿಸಿರುವುದರಿಂದ ತರಗತಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಒಂದು ತಿಂಗಳಿಗೂ ಹೆಚ್ಚು ಕಾಲ ಶಿಕ್ಷಕರು ತರಗತಿಗಳಿಗೆ ಹಾಜರಾಗದಿದ್ದರೆ ವಿದ್ಯಾರ್ಥಿಗಳ ಕಲಿಕೆ ಕುಂಠಿತವಾಗುತ್ತದೆ. ಅದರಲ್ಲೂ ಪ್ರಾಥಮಿಕ ಹಂತದ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ವಿದ್ಯಾರ್ಥಿ ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಇದೀಗ ಎಸ್‌‍ಐಆರ್‌ ಪ್ರಕ್ರಿಯೆಯ ಅವಧಿಯನ್ನು ಮತ್ತಷ್ಟು ವಿಸ್ತರಿಸಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಹೆಚ್ಚುವರಿ ಕಳವಳಕ್ಕೆ ಕಾರಣವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಹೀಗಾಗಿ, ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಅವರು ಶಾಲೆಗಳಲ್ಲಿ ಪೂರ್ಣಾವಧಿ ಬೋಧನೆ ನಡೆಸಲು ಅವಕಾಶ ಕಲ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ವಿದ್ಯಾರ್ಥಿ ಗೋಕುಲ್‌ ಮನವಿ ಮಾಡಿದ್ದಾರೆ.

RELATED ARTICLES

Latest News