ಬೆಂಗಳೂರು, ಫೆ.16- ಇಡೀ ದೇಶದಲ್ಲಿ ರಾಜ್ಯದ ಸಾರಿಗೆ ಸೇವೆಗೆ ಉತ್ತಮ ಹೆಸರಿದ್ದು, ಅದನ್ನು ಮತ್ತಷ್ಟು ಉನ್ನತೀಕರಿಸುವ ದೃಷ್ಟಿಯಿಂದ ಉಡುಪಿ, ಚಿಕ್ಕಬಳ್ಳಾಪುರ, ನೆಲಮಂಗಲ, ಮಡಿಕೇರಿ, ಮಧುಗಿರಿ ಮತ್ತು ಹುಣಸೂರಿನಲ್ಲಿ ಅಂದಾಜು 36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು ಹಾಗೂ ದೇವನಹಳ್ಳಿ ತುಮಕೂರಿನಲ್ಲಿ 10 ಕೋಟಿ ವೆಚ್ಚದಲ್ಲಿ ಸೀಜಿಂಗ್ ಯಾರ್ಡ್‍ಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಯವರು ತಿಳಿಸಿದ್ದಾರೆ.
2024-25ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳೊಳಗೆ ಜಾರಿಗೊಳಿಸಿದ ಶಕ್ತಿ ಯೋಜನೆಯಡಿ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಬಹಳಷ್ಟು ಅನುಕೂಲವಾಗಿದೆ. ಈವರೆಗೆ 165 ಕೋಟಿ ಹೆಚ್ಚು ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದು, ಅದಕ್ಕೆ ಮೂರು ಸಾವಿರ ಕೋಟಿ ರೂ. ಒದಗಿಸಲಾಗಿದೆ ಎಂದರು.
ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ
ಅರ್ಹತಾ ಪತ್ರ ನವೀಕರಣಕ್ಕೆ ಬರುವಂತಹ ಎಲ್ಲಾ ಸಾರಿಗೆ ವಾಹನಗಳಿಗೆ ಅರ್ಹತಾ ಪರೀಕ್ಷೆ ಕೈಗೊಳ್ಳಲು 32 ಸ್ಥಳಗಳಲ್ಲಿ ಸಾರ್ವಜನಿಕ ಖಾಸಗೀ ಸಹಭಾಗಿತ್ವದಲ್ಲಿ ಸ್ವಯಂ ಚಾಲಿತ ಪರೀಕ್ಷಾ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಸಾರಿಗೆ ಇಲಾಖೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಾಹನಗಳ ದಾಖಲಾತಿಗಳ ಡಿಜಿಟಲೀಕರಣಕ್ಕಾಗಿ ಯೋಜನೆಯನ್ನು ಜಾರಿಗೊಳಿಸಲಾಗುವುದು.
ಪ್ರಸಕ್ತ ಸಾಲಿನಲ್ಲಿ ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ, ಬೆಳಗಾವಿ, ಮಂಗಳೂರು ಹಾಗೂ ಭಾಲ್ಕಿ ಕಚೇರಿಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.