ಬೆಂಗಳೂರು,ಫೆ.16- ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್ಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿ ಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ 7.50 ಕೋಟಿ ರೂ. ವೆಚ್ಚ ಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದೆಂದು ಆಶ್ವಾಸನೆ ನೀಡಿದರು.
ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. 2500 ಕಾಫಿ ಕಿಯೋನಿಕ್ಸ್ಗಳನ್ನ 25 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಿ ಇದರ ಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ಮಾಡಲಿದ್ದಾರೆ ಎಂದರು. ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು ಐದು ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲಾಗುವುದು. ಸ್ಥಳೀಯ ಮಹಿಳಾ ಸ್ವಸಹಾಯ ಗುಂಪುಗಳ ಸಕ್ರಿಯ ಭಾಗವಹಿಸುವಹಿಕೆ ಮತ್ತು ನಾಯಕತ್ವದೊಂದಿಗೆ ಗ್ರಾಮಪಂಚಾಯ್ತಿ ಮಟ್ಟದ ಆಡಳಿತ ಬಲಪಡಿಸುವ ಉದ್ದೇಶದಿಂದ ಜಿಪಿ-ಎಸ್ಎಚ್ಜಿ ಒಗ್ಗೂಡಿಸುವ ನೀತಿಯನ್ನು ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ.
ಮಾನವ ಸಂಪನ್ಮೂಲದ ಸಮರ್ಪಕ ಬಳಕೆ ಹಾಗೂ ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯೋಗ ಅವಕಾಶಗಳನ್ನು ಒದಗಿಸಲು ಅನುಕೂಲವಾಗುವಂತೆ ರಾಜ್ಯ ಕೌಶಲ್ಯ ನೀತಿಯನ್ನು ಸಿದ್ದಪಡಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುತ್ತಿರುವ ಕೋರ್ಸ್ಗಳಲ್ಲಿ ವಿಷಯಾಧಾರಿತ ಉದ್ಯಮಶೀಲತೆ ಅಭಿವೃದ್ಧಿ ತರಬೇತಿಯನ್ನು 25 ಸಾವಿರ ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು ಎಂದು ಹೇಳಿದರು.
36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪಥ ನಿರ್ಮಾಣ
ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗ ಆಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರಲು ಯುವ ಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗದಲ್ಲೂ ಆಯೋಜಿಸಲಾಗುತ್ತದೆ ಎಂದು ಪ್ರಕಟಿಸಿದ್ದಾರೆ. ಕೈಗಾರಿಕೆ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ, ಜಿಟಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.
ಮೊದಲ ಹಂತದ ಯೋಜನೆಯನ್ನು ಮೂರು ವರ್ಷಗಳ ಅವಯಲ್ಲಿ ಅಂದಾಜು 120 ಕೋಟಿ ರೂ. ಅನುಷ್ಠಾನ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ. ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜ ನಿಯ ಮೂಲಕ ಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ 150 ಕೋಟಿ ವೆಚ್ಚದಲ್ಲಿ ಜಿಟಿಟಿಸಿ ಪ್ರಾರಂಭ ಮಾಡುವುದಾಗಿ ತಿಳಿಸಿದ್ದಾರೆ.
ಮದ್ಯಪ್ರೀಯರಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ..!
ಎಲೆಕ್ಟ್ರಾನಿಕ್ಸ್ ಮತ್ತು ಕಮುನಿಕೇಷನ್, ಮೆಕ್ಯಾಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್ , ಎಲೆಕ್ಟ್ರಾನಿಕ್ಸ್, ಎಂಜನಿಯರಿಂಗ್, ರೋಬೊಟೆಕ್ಸ್ ಇತ್ಯಾದಿ ಹೆಚ್ಚುವರಿ ಡಿಫ್ಲೋಮೊ ಕೋರ್ಸ್ಗಳನ್ನು ಜಿಟಿಟಿಸಿ ಮಾದರಿಯಲ್ಲಿ ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಇದರಿಂದ 15 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕಲಬುರಗಿಯ ಕೆಜಿಟಿಟಿಐನಲ್ಲಿ ಸಿಎನ್ಸಿ ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಜೇಷ್ಠತಾ ಕೇಂದ್ರವನ್ನು 16 ಕೋಟಿ ವೆಚ್ಚದಲ್ಲಿ ಸ್ಥಾಪನೆ, ಐಟಿಐ ಜಿಟಿಟಿಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂಹನ ತರಬೇತಿಗೆ 5 ಕೋಟಿ ನೀಡಲಾಗುವುದು, ಶ್ರೇಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರತಿಕ್ಷಣಾರ್ಥಿಗಲನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್ನ್ನು ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ಉದ್ಯೋಗ ಶೀಲತೆಯನ್ನು ಹೆಚ್ಚಿಸಲು ಡೂಯಲ್ ಸಿಸ್ಟಮ್ ಆಫ್ ಟ್ರೈನಿಂಗ್(ಡಿಎಸ್ಟಿ)ನ್ನು ರಾಜ್ಯದ ಎಲ್ಲಾ ಐಟಿಐಗಳಲ್ಲಿ ಕೈಗಾರಿಕೆಗಳು ಮತ್ತು ಉದ್ಯಮಗಳ ಸಹಭಾಗಿತ್ವದಲ್ಲಿ ಹಂತ ಹಂತವಾಗಿ ವಿಸ್ತರಿಸಲಾಗುವುದು ಎಂದಿದ್ದಾರೆ. ಒಂದು ಲಕ್ಷ ಮಹಿಳಾ ಸ್ವಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಟುಕ, ಕುರಿ, ಮೇಕೆ ಸಾಗಾಣಿಕೆ, ಜೇನು ಸಾಕಾಣಿಕೆ ಮತ್ತು ಕಿರು ಉದ್ಯಮ ಸ್ಥಾಪಿಸಲು 100 ಕೋಟಿ ವೆಚ್ಚ ಮಾಡುವುದಾಗಿ ಹೇಳಿದ್ದಾರೆ.