Monday, November 25, 2024
Homeರಾಜ್ಯಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್, ನಿರಂತರ ನೀರಿನ ಸೌಲಭ್ಯ

ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್, ನಿರಂತರ ನೀರಿನ ಸೌಲಭ್ಯ

ಬೆಂಗಳೂರು,ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಆಯವ್ಯಯದಲ್ಲಿ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನಿರಂತರ ನೀರಿನ ಸೌಲಭ್ಯಕ್ಕೆ 25 ಕೋಟಿ ರೂ. ಮೀಸಲಿಟ್ಟಿದ್ದಾರೆ. ಹಾಗೇ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೆ ನೀಟ್ ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮತ್ತು ಶಾಲಾ-ಕಾಲೇಜು ಕೊಠಡಿ, ದುರಸ್ತಿ, ಶೌಚಾಲಯ ನಿರ್ಮಾಣಕ್ಕೆ 850 ಕೋಟಿ ರೂಪಾಯಿಯನ್ನು ಮೀಸಲು ಇಡಲಾಗಿದೆ.

ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಥ್ರ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುತ್ತದೆ.

ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ

ಶೀಘ್ರದಲ್ಲೆ ಶಿಕ್ಷಕರು, ಉಪನ್ಯಾಸಕರ ನೇಮಕ:
ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು, ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ ಅಥವಾ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತದೆ.

ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಇದಕ್ಕಾಗಿ ಸರ್ಕಾರದಿಂದ 100 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಜೊತೆಗೆ ಸಿ.ಎಸ್.ಆರ್. ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುತ್ತದೆ.

ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ.

RELATED ARTICLES

Latest News