Saturday, November 23, 2024
Homeರಾಜ್ಯರಾಜ್ಯಸಭೆ ಚುನಾವಣಾ ಕಣದಲ್ಲಿ ಐವರು ಅಭ್ಯರ್ಥಿಗಳು

ರಾಜ್ಯಸಭೆ ಚುನಾವಣಾ ಕಣದಲ್ಲಿ ಐವರು ಅಭ್ಯರ್ಥಿಗಳು

ಬೆಂಗಳೂರು,ಫೆ.17- ವಿಧಾನಸಭೆಯಿಂದ ರಾಜ್ಯಸಭೆಗೆ ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕøತಗೊಂಡಿದ್ದು, ಐವರು ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದವಾಗಿವೆ. ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಕೆ.ಬಾಂಡೆಗೆ, ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಕೇನ್, ಜಿ.ಸಿ.ಚಂದ್ರಶೇಖರ್, ಡಾ.ಸಯ್ಯದ್ ನಾಸೀರ್ ಹುಸೇನ್ ಹಾಗೂ ಜೆಡಿಎಸ್ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರ ನಾಮಪತ್ರಗಳು ಮಾನ್ಯವಾಗಿವೆ.

ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದ ಡಾ.ಕೆ.ಪದ್ಮರಾಜನ್ ಹಾಗೂ ಕೆಂಗನೂರು ಅವರ ನಾಮಪತ್ರಗಳು ತಿರಸ್ಕøತವಾಗಿವೆ. ನಿನ್ನೆ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಫೆ.20ರವರೆಗೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಅಂದು ಸಂಜೆ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

9 ಕಾರಿಡಾರ್‌ಗಳಲ್ಲಿ ಬಸ್ ಲೇನ್ ನಿರ್ಮಿಸಲು ಬಿಬಿಎಂಪಿ ನಿರ್ಧಾರ

ಮೂರು ರಾಜಕೀಯ ಪಕ್ಷಗಳಿಂದ ಐವರು ಅಭ್ಯರ್ಥಿಗಳು ಸ್ರ್ಪಧಿಸಿರುವುದರಿಂದ ಮತದಾನ ನಡೆಯುವುದು ಅನಿವಾರ್ಯವಾಗಿದೆ. ಫೆ.27ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯಲಿದೆ. ಸಂಜೆ 5 ಗಂಟೆಯ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ. ಫೆ.29ರಂದು ರಾಜ್ಯಸಭೆ ಚುನಾವಣೆಯ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

RELATED ARTICLES

Latest News