Homeರಾಜ್ಯಚನ್ನಮರವರ ಸಮಾಧಿಗೆ ಹಾಲು-ತುಪ್ಪ ಸಮರ್ಪಿಸಿದ ಕುಟುಂಬ

ಚನ್ನಮರವರ ಸಮಾಧಿಗೆ ಹಾಲು-ತುಪ್ಪ ಸಮರ್ಪಿಸಿದ ಕುಟುಂಬ

ಹಾಸನ, ಜು.22- ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲುವಿನಲ್ಲಿರು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ ಧರ್ಮಪತ್ನಿ ಚನ್ನಮ ಅವರ ಸಮಾಧಿಗೆ ಇಂದು ಹಾಲು-ತುಪ್ಪ ಬಿಡುವ ಕಾರ್ಯ ನೆರವೇರಿಸಲಾಯಿತು.

ಈ ಕಾರ್ಯದಲ್ಲಿ ದೇವೇಗೌಡರು, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು, ಬಂಧುಗಳು, ಹಿತೈಷಿಗಳು ಹಾಗೂ ಗಣ್ಯರು ಭಾಗಿಯಾಗಿದ್ದರು.

ಜುಲೈ 18ರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಚನ್ನಮ ಅವರ ಪಾರ್ಥಿವ ಶರೀರವನ್ನು ಸೋಮವಾರ ಮಾವಿಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು.

ಗೌಡರ ಕುಟುಂಬದವರು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿ ಅಖಂಡ ದೀಪ ಬೆಳಗಿಸಿದ್ದರು. ದೀಪ ಜು.30ರ ಆರಾಧನಾ ಮಹೋತ್ಸವದವರೆಗೂ ನಿರಂತರವಾಗಿ ಬೆಳಗುವಂತೆ ಮಾಡಬೇಕು ಹಾಗೂ ನಿತ್ಯ ವಿಷ್ಣು ಸಹಸ್ರನಾಮ ಪಾರಾಯಣ ಮಾಡುವಂತೆ ಪುರೋಹಿತರಿಗೆ ಗೌಡರು ನಿರ್ದೇಶನ ನೀಡಿದ್ದರು.

RELATED ARTICLES
spot_img

Latest News