Homeರಾಷ್ಟ್ರೀಯಯುವಜನರ ಭವಿಷ್ಯ ಹಾನಿ ಮಾಡಲೆತ್ನಿಸಿದವರನ್ನು ಸುಮ್ಮನೆ ಬಿಡಲ್ಲ : ಪ್ರಧಾನಿ ಮೋದಿ ಅಭಯ

ಯುವಜನರ ಭವಿಷ್ಯ ಹಾನಿ ಮಾಡಲೆತ್ನಿಸಿದವರನ್ನು ಸುಮ್ಮನೆ ಬಿಡಲ್ಲ : ಪ್ರಧಾನಿ ಮೋದಿ ಅಭಯ

Welfare of youth govt's top priority, won't spare those trying to harm their future: PM Modi

ನವದೆಹಲಿ, ಜುಲೈ 23- ದೇಶದ ಯುವಜನರ ಹಿತ ಮತ್ತು ಕಲ್ಯಾಣವೇ ಕೇಂದ್ರ ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದ್ದು, ಅವರ ಭವಿಷ್ಯಕ್ಕೆ ಹಾನಿ ಮಾಡಲು ಯತ್ನಿಸುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೇಶಾದ್ಯಂತ ಯುವಕರ ಪ್ರತಿಭಟನೆ ಮುಂದುವರಿದಿರುವ ನಡುವೆಯೇ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ ವಿಧಿಸುವ ಉದ್ದೇಶದಿಂದ ಫಾಸ್ಟ್‌‍-ಟ್ರ್ಯಾಕ್‌ ಕೋರ್ಟ್‌ಗಳು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೋದಿ ತಿಳಿಸಿದ್ದಾರೆ.

ಎಕ್ಸ್‌‍ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ, ನಮ್ಮ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಯುವಕರ ಭವಿಷ್ಯಕ್ಕೆ ಹಾನಿ ಮಾಡಲು ಯತ್ನಿಸುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗೆ ನಿರ್ದೇಶನ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಈಗಾಗಲೇ ಕೈಗೊಂಡಿರುವ ಕ್ರಮಗಳ ಸರಣಿಯ ಮುಂದುವರಿಕೆಯಾಗಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

RELATED ARTICLES

Latest News