ಬೆಂಗಳೂರು,ಫೆ.19- ರಾಜ್ಯದಲ್ಲಿ ಬೇಡಿಕೆಗೆ ಅನುಗುಣವಾಗಿ ವಿದ್ಯುತ್‍ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಪರಿಷತ್‍ನಲ್ಲಿ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಳೆ ಕೊರತೆಯಾಗಿದ್ದರೂ ಅಣೆಕಟ್ಟೆಗಳಲ್ಲಿ ಹೆಚ್ಚಿನ ನೀರು ಸಂಗ್ರಹವಾಗಿದ್ದರಿಂದ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಿಲ್ಲ. ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತದೆ ಎಂದು ಹೇಳಿದರು.
ಇಲ್ಲಿಯವರೆಗೆ ವಿದ್ಯುತ್ ಅಭಾವ ಇಲ್ಲ. ಅಗತ್ಯವಿರುವಷ್ಟು ವಿದ್ಯುತ್ ಪೂರೈಕೆಯಾಗಲಿದೆ. ಬೇರೆ ಬೇರೆ ರಾಜ್ಯಗಳಿಂದಲೂ ವಿದ್ಯುತ್ ಖರೀದಿಗೆ ಕ್ರಮ ವಹಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಯ ಜನಪ್ರತಿನಿಧಿಗಳ ಜೊತೆ ಈಗಾಗಲೇ ಸಭೆ ಮಾಡಿದ್ದೇವೆ ಎಂದು ತಿಳಿಸಿದರು. ಆರು ಲಕ್ಷ ಕಿಮೀ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಆಗುತ್ತಿದೆ. ಒಟ್ಟು 10 ಲಕ್ಷ ಟ್ರಾನ್ಸ್‍ಫರ್ಮರ್‍ಗಳು ಇವೆ. ಬಹುತೇಕ ರೈತರು ಕೃಷಿ ಪಂಪ್‍ಸೆಟ್‍ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಆದರೆ ನಾವು ವಿದ್ಯುತ್ ಸಂಪರ್ಕ ಕಡಿತಗೊಳಿಸಿಲ್ಲ. ಐಪಿ ಸೆಟ್ ಪಡೆದು ಸಕ್ರಮ ಮಾಡಿಕೊಳ್ಳುವಂತೆ ರೈತರಿಗೆ ಮನವಿ ಮಾಡುತ್ತಿದ್ದೇವೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊಡುವಂತೆ ವಿಜಯೇಂದ್ರಗೆ ವರಿಷ್ಠರ ಸೂಚನೆ
ಗ್ರಾಮೀಣ ಭಾಗದಲ್ಲಿ ಸಮಸ್ಯೆಯಾದ ಟ್ರಾನ್ಸ್‍ಫರ್ಮರ್‍ಗಳನ್ನು 48 ಘಂಟೆಯೊಳಗೆ ಕೊಡಿ. ನಗರ ವ್ಯಾಪ್ತಿಯಲ್ಲಿ 24 ಘಂಟೆಯೊಳಗೆ ಕೊಡಿ ಎಂದು ಸೂಚನೆ ನೀಡಿದ್ದೇನೆ ಎಂದರು. ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ರಾತ್ರಿ ಸಮಯದಲ್ಲಿ ರೈತರು ಹೊಲಗದ್ದೆಗಳಿಗೆ ಹೋಗಲು ಆಗುವುದಿಲ್ಲ. ಸಾರ್ವಜನಿಕವಾಗಿ ತ್ರಿ ಫೇಸ್ ಕರೆಂಟ್ ಅವ ಪ್ರಕಟ ಮಾಡಿ ಎಂದಾಗ, ಮಾದ್ಯಮಗಳಲ್ಲಿ ಸಮಯದ ಅವಧಿಯನ್ನು ಪ್ರಕಟ ಮಾಡಲು ಸೂಚನೆ ಕೊಡುತ್ತೇನೆ ಎಂದು ಜಾರ್ಜ್ ಪ್ರತಿಕ್ರಿಯಿಸಿದರು.