Friday, November 22, 2024
Homeರಾಷ್ಟ್ರೀಯ | Nationalಕಾಂಗ್ರೆಸ್ ಶಾಸಕರನ್ನು ಬೇಟೆಯಾಡುತ್ತಿದೆ ಬಿಜೆಪಿ : ಬಘೇಲ್ ಆರೋಪ

ಕಾಂಗ್ರೆಸ್ ಶಾಸಕರನ್ನು ಬೇಟೆಯಾಡುತ್ತಿದೆ ಬಿಜೆಪಿ : ಬಘೇಲ್ ಆರೋಪ

ರಾಯ್‍ಪುರ,ಫೆ.20- ಮುಂಬರುವ ಲೋಕಸಭೆ ಚುನಾವಣೆಗೆ ಸಚಿವ ಸ್ಥಾನ ಮತ್ತು ಟಿಕೆಟ್ ನೀಡುವ ಮೂಲಕ ಛತ್ತೀಸ್‍ಗಢದಲ್ಲಿ ಆಡಳಿತಾರೂಢ ಬಿಜೆಪಿ ತನ್ನ ಪಕ್ಷದ ಶಾಸಕರನ್ನು ಬೇಟೆಯಾಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಆರೋಪಿಸಿದ್ದಾರೆ. ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ -ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಸೋಲನ್ನು ನಿರೀಕ್ಷಿಸಿ ಬಿಜೆಪಿ ಇಂತಹ ತಂತ್ರಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಬಘೇಲ್, ಕೇಂದ್ರದಲ್ಲಿ ಅಧಿಕಾರವನ್ನು ಉಳಿಸಿಕೊಂಡರೆ ಲೋಕಸಭೆ ಚುನಾವಣೆ ಟಿಕೆಟ್ ಮತ್ತು ಸಚಿವ ಸ್ಥಾನ ನೀಡುವ ಭರವಸೆ ನೀಡಿ ಬಿಜೆಪಿ ತನ್ನನ್ನು ಸಂಪರ್ಕಿಸಿದೆ ಎಂದು ಇತ್ತೀಚೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್‍ನ ಶಾಸಕರೊಬ್ಬರು ನನಗೆ ಹೇಳಿದ್ದರು ಎಂದು ಅವರು ತಿಳಿಸಿದ್ದಾರೆ.

ಬಿಹಾರ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು 2024 ರ ರಾಷ್ಟ್ರೀಯ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಎದುರಿಸಲಿದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ. ಹೀಗಾಗಿ ಸ್ವಂತ ಬಲದ ಮೇಲೆ ಚುನಾವಣೆ ಎದುರಿಸುವ ವಿಶ್ವಾಸ ಇಲ್ಲದಿರುವುದರಿಂದ ಬೇರೆ ಪಕ್ಷಗಳ ಸಂಸದರ ಮೇಲೆ ಬಿಜೆಪಿ ಕಣ್ಣು ಹಾಕಿದೆ ಎಂದು ಅವರು ದೂರಿದರು. 2018 ರಿಂದ 2023 ರವರೆಗೆ ಛತ್ತೀಸ್‍ಗಢ ಸಿಎಂ ಆಗಿದ್ದ ಬಘೇಲಧಿ ಅವರು ಕಳೆದ ನವೆಂಬರ್‍ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಸಿತ್ತು.

RELATED ARTICLES

Latest News